Connect with us

LATEST NEWS

ಅಕ್ಟೋಬರ್ 28 ,29 ರಂದು ಉಡುಪಿಯಲ್ಲಿ ವಿಶ್ವ ಬಂಟರ ಸಮ್ಮೇಳನ – ಐಶ್ವರ್ಯಾ ರೈ, ಶಿಲ್ಪಾ ಶೆಟ್ಟಿ, ಸುನಿಲ್ ಶೆಟ್ಟಿ, ಪೂಜಾ ಹೆಗ್ಡೆ ಭಾಗವಹಿಸುವ ಸಾಧ್ಯತೆ

ಉಡುಪಿ ಅಕ್ಟೋಬರ್ 26: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಅಕ್ಟೋಬರ್ 28 ಮತ್ತು 29ರಂದು ವಿಶ್ವ ಬಂಟರ ಸಮ್ಮೇಳನ-2023 (ಕ್ರೀಡಾ ಸಂಗಮ ಮತ್ತು ಸಾಂಸ್ಕೃತಿಕ ಸಂಭ್ರಮ) ಉಡುಪಿಯಲ್ಲಿ ಅದ್ಧೂರಿಯಾಗಿ ನಡೆಯಲಿದೆ. ಸಮ್ಮೇಳನವನ್ನು ಮುಖ್ಯಮಂತ್ರಿ, ಸಿದ್ಧರಾಮರು. ಉದ್ಘಾಟಿಸಲಿದ್ದು, ಸಮಾರೋಪ ಸಮಾರಂಭದಲ್ಲಿ ಗೃಹ .ಪರಮೇಶ್ವರ್‌ಭಾಗವಹಿಸಲಿದ್ದಾರೆ.


ಅಕ್ಟೋಬರ್ 28ರಂದು ಬೆಳಗ್ಗೆ ಗಂಟೆಗೆ ಉಡುಪಿ ಬೋರ್ಡ್ ಹೈಸ್ಕೂಲ್‌ನಿಂದ ಬೃಹತ್ ನಗರದ ಮೆರವಣಿಗೆಯಲ್ಲಿ ಅಜ್ಜರಕಾಡು ಮೈದಾನಕ್ಕೆ ಅತಿಥಿ ಗಣ್ಯರನ್ನು ಕರೆ ತರಲಾಗುವುದು. 1 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮೇಳನವನ್ನು ಉದ್ಘಾಟಿಸಿ, ಕ್ರೀಡೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಕ್ರೀಡೋತ್ಸವ ಮಧ್ಯಾಹ್ನ 3 ಗಂಟೆಯಿಂದ ರಾತ್ರಿ 11 ಗಂಟೆ ವರೆಗೆ ಪ್ರೊ-ಕಬಡ್ಡಿ ಮಾದರಿಯಲ್ಲಿ 8 ತಂಡಗಳ ಮಧ್ಯೆ ಕಬಡ್ಡಿ ಪಂದ್ಯಾಟ ನಡೆಯಲಿದೆ. ಅಕ್ಟೋಬರ್ 29ರಂದು ಸಾಂಸ್ಕೃತಿಕ ವೈಭವ ಸಮಾರೋಪ ಸಮಾರಂಭದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ವಿಶೇಷ ಅತಿಥಿಯಾಗಿ ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭಾಗವಹಿಸಲಿದ್ದಾರೆ.


ಉದ್ಘಾಟನೆಗೆ ಮೊದಲು ನಡೆಯುವ ಅದ್ದೂರಿ ಮೆರವಣಿಗೆಯಲ್ಲಿ 62ಕ್ಕೂ ಅಧಿಕ ಬಂಟರ ಸಂಘಗಳ 6,000-7,000 ಮಂದಿ ಭಾಗವಹಿಸಲಿದ್ದಾರೆ. ವಿವಿಧ ಕಲಾ ತಂಡಗಳು, ವೈವಿಧ್ಯಮಯ ಸ್ತಬ್ಧ ಚಿತ್ರಗಳು, ಕಂಬಳದ ಕೋಣಗಳು, ಕೇರಳದ ತೈಯ್ಯಂ, ಹುಲಿ ವೇಷ, ಕೀಲುಕುದುರೆ ಗೊಂಬೆಗಳು, ಹೊನ್ನಾವರ ಬ್ಯಾಂಡ್ ಸೆಟ್, ಅಗೋಳಿ ಮಂಜಣ್ಣನ ವೇಷ, ಚೆಂಡೆ, ವಾದ್ಯ, ಡೋಲು, ನಾಗಸ್ವರ, ಬಣ್ಣದ ಕೊಡೆಗಳು ಹಾಗೂ ವಿವಿಧ ವಿನೋದಾವಳಿಗಳು ಮೆರವಣಿಗೆಯೆ ಮೆರುಗು ಹೆಚ್ಚಿಸಲಿದೆ. ಆ ಬಳಿಕ ಅಜ್ಜರಕಾಡು ಮೈದಾನದಲ್ಲಿ ವೈವಿಧ್ಯಮಯ ಸಮವಸ್ತ್ರ ಧರಿಸಿದ ಬಂಟರ ತಂಡಗಳಿಂದ ಆಕರ್ಷಕ ಪಥಸಂಚಲನ ನಡೆಯಲಿದೆ.

ಸಮ್ಮೇಳನದಲ್ಲಿ ದೇಶದ ಪ್ರಮುಖ ಸಿನಿತಾರೆಯರಾದ ಸುನಿಲ್ ಶೆಟ್ಟಿ, ರಕ್ಷಿತ್ ಶೆಟ್ಟಿ, ಐಶ್ವರ್ಯ ರೈ, ಶಿಲ್ಪಾ ಶೆಟ್ಟಿ, ರಿಷಬ್ ಶೆಟ್ಟಿ, ಗುರುಕಿರಣ್ ಶೆಟ್ಟಿ, ಶ್ರೀನಿಧಿ ಶೆಟ್ಟಿ, ಶಿವಧ್ವಜ್ ಶೆಟ್ಟಿ, ಅನುಷ್ಕಾ ಶೆಟ್ಟಿ, ಪೂಜಾ ಹೆಗ್ಡೆ ರಾಜ್ ಬಿ. ಶೆಟ್ಟಿ, ರೂಪೇಶ್ ಶೆಟ್ಟಿ, ಯಶ್ ಹಾಗೂ ಭಾರತದ ನಿರ್ದೇಶಕರು ಭಾಗವಹಿಸಲಿದ್ದಾರೆ. ಹೆಸರಾಂತ ಚಿತ್ರತಾರೆಯರು, ನಿರ್ಮಾಪಕರು ಭಾಗವಹಿಸಲಿದ್ದಾರೆ.

Share Information
Advertisement
Click to comment

You must be logged in to post a comment Login

Leave a Reply