Connect with us

    LATEST NEWS

    ಆರೋಪಿ ಎಲ್ಲೇ ಇದ್ದರೂ ಪೊಲೀಸರ ಮುಂದೆ ತಂದು ನಿಲ್ಲಿಸುತ್ತೇನೆ ಎಂದ ದೈವ -ವರ್ಷದ ಬಳಿಕ ನ್ಯಾಯಾಲಯದ ಮುಂದೆ ಶರಣಾದ ಕೊಲೆ ಆರೋಪಿ

    ಉಡುಪಿ ಮೇ 29: ಪಾಂಗಾಳದಲ್ಲಿ ಡ್ರ‍್ಯಾಗನ್ ನಿಂದ ಇರಿದು ಕೊಲೆ ಮಾಡಿದ ಪ್ರಮುಖ ಆರೋಪಿಯನ್ನು ದೈವ ಇದೀಗ ನ್ಯಾಯಾಲಯದ ಮುಂದೆ ಶರಣಾಗತಿ ಮಾಡಿದೆ. ಆರೋಪಿ ಎಲ್ಲೇ ಇದ್ದರೂ ಪೊಲೀಸರ ಮುಂದೆ ತಂದು ನಿಲ್ಲಿಸುತ್ತೇನೆ ಎಂಬ ದೈವದ ಮಾತು ನಿಜವಾಗಿದೆ.


    ಕಳೆದ ವರ್ಷ ಫೆಬ್ರವರಿ 5 ರಂದು ಪಾಂಗಾಳ ಮಂಡೇಡಿಯ ಶರತ್ ಶೆಟ್ಟಿಯನ್ನು ಡ್ರ್ಯಾಗನ್ ನಿಂದ ಇರಿದು ಕೊಲೆ ಮಾಡಲಾಗಿತ್ತು. ಕೊಲೆ ಮಾಡಿದ ಬಳಿಕ ಆರೋಪಿಗಳು ಪರಾರಿಯಾಗಿದ್ದು, ಪೊಲೀಸರು ಎಷ್ಟೇ ಹುಡುಕಾಡಿದರೂ ಆರೋಪಿಗಳು ಪತ್ತೆಯಾಗಿರಲಿಲ್ಲ. ಈ ನಡುವೆ ಮನೆಯವರು ಕುಟುಂಬದ ದೈವದ ಮೊರೆ ಹೋಗಿದ್ದರು. “ಆರೋಪಿ ಎಲ್ಲೇ ಇದ್ದರೂ ಪೊಲೀಸರ ಮುಂದೆ ತಂದು ನಿಲ್ಲಿಸುತ್ತೇನೆ” ಎಂದು ದೈವ ಮನೆಯವರಿಗೆ ಅಭಯ ನೀಡಿತ್ತು. ಅದರಂತೆ ಆತ ಮೇ 23ರಂದು ತಾನಾಗಿಯೇ ನ್ಯಾಯಾಲಯದ ಮುಂದೆ ಹಾಜರಾಗಿರುವುದು ವಿಶೇಷವಾಗಿದೆ.


    ಕೊಲೆ ನಡೆದು 15 ತಿಂಗಳು ಕಳೆದಿದೆ. ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪತ್ತೆ ಮಾಡಲು ಪೊಲೀಸರಿಗೂ ಸಾಧ್ಯವಾಗಲಿಲ್ಲ. ಆದರೆ ತಡವಾದರೂ ದೈವದ ಮಾತು ನಿಜವಾಗಿದೆ. ತುಳುನಾಡಿನ ಸತ್ಯಗಳು ಇನ್ನೂ ಪವಾಡ ತೋರಿಸುತ್ತಿವೆ ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ. ಇದೀಗ ಆತ ತಾನಾಗಿಯೇ ಮೇ 23ರಂದು ಉಡುಪಿಯ 3ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ನ್ಯಾಯಾಲಯಕ್ಕೆ ವಕೀಲರ ಮೂಲಕ ಹಾಜರಾಗಿ ಶರಣಾಗಿದ್ದನು. ಬಳಿಕ ವಿಚಾರಣೆ ನಡೆಸಿದ ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿತ್ತು. ಪ್ರಕರಣದ ಪ್ರಸ್ತುತ ತನಿಖಾಧಿಕಾರಿಯಾಗಿರುವ ಕಾಪು ವೃತ್ತ ನಿರೀಕ್ಷಕಿ ಜಯಶ್ರೀ ಮಾನೆ ಅವರು ಆರೋಪಿ ಯೋಗೀಶ್‌ನ್ನು ನ್ಯಾಯಾಂಗ ಬಂಧನದಿಂದ ಹೆಚ್ಚಿನ ತನಿಖೆ ನಡೆಸಲು ಪೊಲೀಸ್ ಕಸ್ಟಡಿಗೆ ತೆಗೆದುಕೊಂಡಿರುತ್ತಾರೆ..

    Share Information
    Advertisement
    Click to comment

    You must be logged in to post a comment Login

    Leave a Reply