Connect with us

UDUPI

ಉಡುಪಿ 109 ಮಂದಿಗೆ ಕೊರೊನಾ ಸೊಂಕು

ಉಡುಪಿ ಜುಲೈ 18: ಉಡುಪಿ ಜಿಲ್ಲೆಯಲ್ಲಿ ಇಂದು ಮತ್ತೆ 109 ಜನರಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದ್ದು, ಒಟ್ಟು ಕೊರೊನಾ ಸೊಂಕಿತರ ಸಂಖ್ಯೆ 2 ಸಾವಿರ ದಾಟಿದೆ. ಇಂದಿನ 109 ಪ್ರಕರಣಗಳೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೊಂಕಿತರ ಸಂಖ್ಯೆ 2088ಕ್ಕೆ ಏರಿಕೆಯಾಗಿದೆ.


ಉಡುಪಿ ಜಿಲ್ಲೆಯಲ್ಲಿ 1586 ಮಂದಿ ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಸದ್ಯ ಜಿಲ್ಲೆಯಲ್ಲಿ 492 ಸಕ್ರಿಯ ಪ್ರಕರಣಗಳಿದ್ದು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ 9 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.
ಇನ್ನು ಕುಂದಾಪುರ ನಗರ ಪೊಲೀಸ್ ಠಾಣೆಯ ಎಎಸ್ಐ ಒಬ್ಬರಿಗೆ ಕೊರೊನಾ ಸೊಂಕು ದೃಢಪಟ್ಟಿದ್ದು, ಮುಂಜಾಗೃತಾ ಕ್ರಮವಾಗಿ ಠಾಣೆಯನ್ನು ಒಂದು ದಿನ ಸೀಲ್ ಡೌನ್ ಮಾಡಲಾಗಿದೆ. ಕಾರ್ಕಳ ತಾಲೂಕಿನ ಸಚ್ಚೇರಿಪೇಟೆಯ ಆರೋಗ್ಯ ಕೇಂದ್ರದ ಡಿ ದರ್ಜೆ ನೌಕರರೊಬ್ಬರಿಗೆ ಕೊರೊನಾ ಸೊಂಕು ತಗುಲಿದ್ದು, ಆರೋಗ್ಯ ಕೇಂದ್ರವನ್ನು ಸೀಲ್ ಡೌನ್ ಮಾಡಲಾಗಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *