LATEST NEWS
ದಕ್ಷಿಣಕನ್ನಡ 29 ಉಡುಪಿ 14 ಕೊರೊನಾ ಪ್ರಕರಣ ದಾಖಲು
ಮಂಗಳೂರು ಜೂನ್ 25: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು 29 ಕೊರೊನಾ ಪ್ರಕರಣ ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೊಂಕಿತರ ಸಂಖ್ಯೆ 486ಕ್ಕೆ ಏರಿಕೆಯಾಗಿದೆ.
ಇಂದು ದೃಢಪಟ್ಟ 29 ಪ್ರಕರಣಗಳಲ್ಲಿ ಬಹುತೇಕ ಪ್ರಕರಣಗಳು ಸೌದಿ ಹಾಗೂ ಮಸ್ಕತ್ ನಿಂದ ಆಗಮಿಸಿದವರಾಗಿದ್ದಾರೆ.
ಇಂದು ದಕ್ಷಿಣಕನ್ನಡ ಜಿಲ್ಲೆಯಲ್ಲಿ 88 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇಲ್ಲಿಯವರೆಗೆ ಜಿಲ್ಲೆಯಲ್ಲಿ ಒಟ್ಟು 334 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಜಿಲ್ಲೆಯಲ್ಲಿ ಸದ್ಯ 142 ಸಕ್ರಿಯ ಪ್ರಕರಣಗಳಿದ್ದು, ಒಟ್ಟು 10 ಮಂದಿ ಕೊರೊನಾದಿಂದಾಗಿ ಪ್ರಾಣ ಕಳೆದುಕೊಂಡಿದ್ದಾರೆ.
ಇನ್ನು ಉಡುಪಿಯಲ್ಲಿ ಇಂದು 14 ಕೊರೊನಾ ಪ್ರಕರಣ ದಾಖಲಾಗಿದೆ. ಇದರೊಂದಿಗೆ ಉಡುಪಿಯಲ್ಲಿ ಒಟ್ಟು1 ಕೊರೊನಾ ಸೊಂಕಿತರ ಸಂಖ್ಯೆ 1116 ಕ್ಕೆ ಏರಿಕೆಯಾಗಿದೆ. ಇಂದು ಪತ್ತೆಯಾದ 14 ಪ್ರಕರಣಗಳಲ್ಲಿ ಬಹುತೇಕ ಮಹಾರಾಷ್ಟ್ರದಿಂದ ಆಗಮಿಸಿದವರಾಗಿದ್ದಾರೆ. ಉಡುಪಿಯಲ್ಲಿ ಇಂದು 33 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಉಡುಪಿಯಲ್ಲಿ ಇವರೆಗೆ 1011 ಮಂದಿ ಕೊರೊನಾದಿಂದ ಗುಣಮುಖರಾಗಿದ್ದು, ಸದ್ಯ 103 ಕೊರೊನಾ ಸೊಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
You must be logged in to post a comment Login