UDUPI
ಉಡುಪಿ ಜಿಲ್ಲೆ 160 ಕೊರೊನಾ ಪ್ರಕರಣ 1 ಸಾವು
ಉಡುಪಿ ಜುಲೈ 23: ಉಡುಪಿ ಜಿಲ್ಲೆಯಲ್ಲಿ ಇಂದು ಕೊರೊನಾ ಸ್ಪೋಟ ಸಂಭವಿಸಿದ್ದು ಜಿಲ್ಲೆಯಲ್ಲಿ ಬರೋಬ್ಬರಿ 160 ಮಂದಿಗೆ ಕೊರೊನಾ ಸೊಂಕು ಕಾಣಿಸಿಕೊಂಡಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೊಂಕಿತರ ಸಂಖ್ಯೆ 2846 ಕ್ಕೆ ಏರಿಕೆಯಾಗಿದೆ.
ಉಡುಪಿ ಜಿಲ್ಲೆಯಲ್ಲಿ ಒಟ್ಟು 1841 ಮಂದಿ ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಸದ್ಯ ಜಿಲ್ಲೆಯಲ್ಲಿ 994 ಸಕ್ರಿಯ ಪ್ರಕರಣಗಳಿದ್ದು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ 13 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.
You must be logged in to post a comment Login