UDUPI
ಉಡುಪಿ ಜಿಲ್ಲೆಯಲ್ಲಿ 173 ಕೊರೊನಾ ಪ್ರಕರಣ ದಾಖಲು
ಉಡುಪಿ ಜುಲೈ 29: ಉಡುಪಿ ಜಿಲ್ಲೆಯಲ್ಲಿ ಇಂದು ಕೊರೊನಾ ಸ್ಪೋಟ ಸಂಭವಿಸಿದ್ದು ಜಿಲ್ಲೆಯಲ್ಲಿ ಬರೋಬ್ಬರಿ 173 ಮಂದಿಗೆ ಕೊರೊನಾ ಸೊಂಕು ಕಾಣಿಸಿಕೊಂಡಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೊಂಕಿತರ ಸಂಖ್ಯೆ 3895 ಕ್ಕೆ ಏರಿಕೆಯಾಗಿದೆ.
ಉಡುಪಿ ಜಿಲ್ಲೆಯಲ್ಲಿ ಒಟ್ಟು 2323 ಮಂದಿ ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಸದ್ಯ ಜಿಲ್ಲೆಯಲ್ಲಿ 1547 ಸಕ್ರಿಯ ಪ್ರಕರಣಗಳಿದ್ದು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ 25 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.