UDUPI
ಉಡುಪಿಯಲ್ಲಿ ಇಂದು ಮತ್ತೆ 213 ಕೊರೊನಾ ಪಾಸಿಟಿವ್ ಪ್ರಕರಣ ದಾಖಲು
ಉಡುಪಿ ಜುಲೈ 31: ಉಡುಪಿ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಏರು ಗತಿಯಲ್ಲೇ ಸಾಗುತ್ತಿದ್ದು, ಇಂದು ಜಿಲ್ಲೆಯಲ್ಲಿ ಬರೋಬ್ಬರಿ 213 ಮಂದಿಗೆ ಕೊರೊನಾ ಸೊಂಕು ಕಾಣಿಸಿಕೊಂಡಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೊಂಕಿತರ ಸಂಖ್ಯೆ 4356 ಕ್ಕೆ ಏರಿಕೆಯಾಗಿದೆ.
ಉಡುಪಿ ಜಿಲ್ಲೆಯಲ್ಲಿ ಒಟ್ಟು 2522 ಮಂದಿ ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಸದ್ಯ ಜಿಲ್ಲೆಯಲ್ಲಿ 1805 ಸಕ್ರಿಯ ಪ್ರಕರಣಗಳಿದ್ದು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ 29 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.
You must be logged in to post a comment Login