UDUPI
ಉಡುಪಿ 22 ಮಂದಿಗೆ ಕೊರೊನಾ ಸೊಂಕು

ಉಡುಪಿ ಜುಲೈ 9: ಉಡುಪಿಯಲ್ಲಿಂದು ಮತ್ತೆ 22 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೊಂಕಿತರ ಸಂಖ್ಯೆ 1443ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿಂದು 865 ಜನರ ಗಂಟಲು ದ್ರವ ಪರೀಕ್ಷೆ ನಡೆಸಲಾಗಿದ್ದು, ಅದರಲ್ಲಿ 22 ಜನರ ವರದಿ ಪಾಸಿಟಿವ್ ಬಂದಿದೆ. ಉಳಿದಂತೆ 843 ಜನರ ಗಂಟಲು ದ್ರವ ಪರೀಕ್ಷಾ ವರದಿ ನೆಗೆಟಿವ್ ಆಗಿದೆ.
ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 1443ಕ್ಕೆ ಏರಿಕೆಯಾಗಿದ್ದು, ಅದರಲ್ಲಿ 1217 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಇದುವರಗೆ ಮೂವರು ಸೋಂಕಿತರು ಸಾವನ್ನಪ್ಪಿದ್ದಾರೆ. ಸದ್ಯ ಜಿಲ್ಲೆಯಲ್ಲಿ 223 ಸಕ್ರಿಯ ಪ್ರಕರಣಗಳಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಇನ್ನೂ 2433 ಕೊರೊನಾ ಪರೀಕ್ಷೆಯ ವರದಿ ಬರಲು ಬಾಕಿ ಇದೆ.
