Connect with us

LATEST NEWS

ಉಡುಪಿ 348; ದಕ್ಷಿಣಕನ್ನಡ 228 ಕೊರೊನಾ ಪ್ರಕರಣ ದಾಖಲು

ಮಂಗಳೂರು ಅಗಸ್ಟ್ 22: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು 228 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಇಂದು 4 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇಂದಿನ 228 ಪ್ರಕರಣಗಳೊಂದಿಗೆ ದಕ್ಷಿಣಕನ್ನಡದಲ್ಲಿ ಒಟ್ಟು ಸೊಂಕಿತರ ಸಂಖ್ಯೆ 10317 ಕ್ಕೆ ಏರಿಕೆಯಾಗಿದೆ. ಇಂದು ಜಿಲ್ಲೆಯಲ್ಲಿ 320 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಸದ್ಯ ಜಿಲ್ಲೆಯಲ್ಲಿ 2319 ಸಕ್ರಿಯ ಕೊರೊನಾ ಪ್ರಕರಣಗಳಿದ್ದು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಂದು ಕೂಡ ಜಿಲ್ಲೆಯಲ್ಲಿ 4 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 305 ಕ್ಕೆ ಏರಿಕೆಯಾಗಿದೆ. ಇಂದು ದಾಖಲಾದ ಪ್ರಕರಣಗಳಲ್ಲಿ ಮಂಗಳೂರು -150, ಬಂಟ್ವಾಳ – 3, ಸುಳ್ಯ -8, ಬೆಳ್ತಂಗಡಿ – 7, ಪುತ್ತೂರು – 15, ಹೊರ ಜಿಲ್ಲೆಯವರು – 25 ಪ್ರಕರಣಗಳಿವೆ.

ಉಡುಪಿ ಜಿಲ್ಲೆಯಲ್ಲಿ ಇಂದು ಒಂದೇ ದಿನ 348 ಕೊರೊನಾ ಪ್ರಕರಣ ದಾಖಲಾಗಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೊಂಕಿತರ ಸಂಖ್ಯೆ 10016 ಕ್ಕೆ ಏರಿಕೆಯಾಗಿದೆ. ಉಡುಪಿಯಲ್ಲಿ ಇಂದು ಕೊರೊನಾದಿಂದಾಗಿ ಯಾವುದೇ ಸಾವು ಸಂಭವಿಸಿಲ್ಲ.
ಉಡುಪಿ ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 7092 ಮಂದಿ ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ.

ಸದ್ಯ ಜಿಲ್ಲೆಯಲ್ಲಿ 2842 ಸಕ್ರಿಯ ಪ್ರಕರಣಗಳಿದ್ದು ಅದರಲ್ಲಿ 1175 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ 1667 ಮಂದಿ ಹೋಂ ಐಸೋಲೇಶನ್ ನಲ್ಲಿದ್ದಾರೆ. ಇಂದು ಉಡುಪಿಯಲ್ಲಿ ಕೊರೊನಾದಿಂದಾಗಿ ಯಾವುದೇ ಸಾವು ಸಂಭವಿಸಿಲ್ಲ. ಉಡುಪಿ ಜಿಲ್ಲೆಯಲ್ಲಿ ಇದುವರೆಗೆ 82 ಮಂದಿ ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ. ಇಂದು ದಾಖಲಾದ ಪ್ರಕರಣಗಳಲ್ಲಿ ಉಡುಪಿ – 165, ಕುಂದಾಪುರ -132 , ಕಾರ್ಕಳ -46, ಜಿಲ್ಲೆಯ ಹೊರಗಿನ – 5 ಪ್ರಕರಣಗಳಿವೆ.

Facebook Comments

comments