Connect with us

    LATEST NEWS

    ಉಡುಪಿ ಜಿಲ್ಲೆಯಲ್ಲಿ 241 ಕೊರೊನಾ ಪಾಸಿಟಿವ್ 2 ಸಾವು

    ಉಡುಪಿ ಅಗಸ್ಟ್ 15: ಉಡುಪಿ ಜಿಲ್ಲೆಯಲ್ಲಿ ಇಂದು ಒಂದೇ ದಿನ 241 ಕೊರೊನಾ ಪ್ರಕರಣ ದಾಖಲಾಗಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೊಂಕಿತರ ಸಂಖ್ಯೆ 7738 ಕ್ಕೆ ಏರಿಕೆಯಾಗಿದೆ. ಉಡುಪಿಯಲ್ಲಿ ಇಂದು ಕೊರೊನಾದಿಂದಾಗಿ ಇಬ್ಬರು ಪ್ರಾಣ ಕಳೆದುಕೊಂಡಿದ್ದಾರೆ.

    ಉಡುಪಿ ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 5101 ಮಂದಿ ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಸದ್ಯ ಜಿಲ್ಲೆಯಲ್ಲಿ 2560 ಸಕ್ರಿಯ ಪ್ರಕರಣಗಳಿದ್ದು ಅದರಲ್ಲಿ 1383 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ 1177 ಮಂದಿ ಹೋಂ ಐಸೋಲೇಶನ್ ನಲ್ಲಿದ್ದಾರೆ. ಇಂದು ಉಡುಪಿಯಲ್ಲಿ ಕೊರೊನಾದಿಂದಾಗಿ ಇಂದು ಇಬ್ಬರು ಸಾವನಪ್ಪಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಇದುವರೆಗೆ 77 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಇಂದು ದಾಖಲಾದ ಪ್ರಕರಣಗಳಲ್ಲಿ ಉಡುಪಿ – 138, ಕುಂದಾಪುರ -70 , ಕಾರ್ಕಳ -30, ಜಿಲ್ಲೆಯ ಹೊರಗಿನ – 3 ಪ್ರಕರಣಗಳಿವೆ.

    Share Information
    Advertisement
    Click to comment

    You must be logged in to post a comment Login

    Leave a Reply