LATEST NEWS
ಉಡುಪಿ; ಇಂದಿನ 282 ಪ್ರಕರಣಗಳೊಂದಿಗೆ 6 ಸಾವಿರಕ್ಕೆ ಏರಿದ ಒಟ್ಟು ಸೊಂಕಿತರ ಸಂಖ್ಯೆ
ಉಡುಪಿ ಅಗಸ್ಟ್ 9: ಉಡುಪಿ ಜಿಲ್ಲೆಯಲ್ಲಿ ಇಂದು ಒಂದೇ ದಿನ 282 ಕೊರೊನಾ ಪ್ರಕರಣ ದಾಖಲಾಗಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೊಂಕಿತರ ಸಂಖ್ಯೆ 6201 ಕ್ಕೆ ಏರಿಕೆಯಾಗಿದೆ. ಉಡುಪಿಯಲ್ಲಿ ಇಂದು ಯಾವುದೇ ಸಾವು ದಾಖಲಾಗಲಿಲ್ಲ.
ಉಡುಪಿ ಜಿಲ್ಲೆಯಲ್ಲಿ ಒಟ್ಟು 3444 ಮಂದಿ ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಸದ್ಯ ಜಿಲ್ಲೆಯಲ್ಲಿ 2697 ಸಕ್ರಿಯ ಪ್ರಕರಣಗಳಿದ್ದು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಉಡುಪಿಯಲ್ಲಿ ಯಾವುದೇ ಕೊರೊನಾ ಸಾವು ಸಂಭವಿಸಿಲ್ಲ. ಉಡುಪಿ ಜಿಲ್ಲೆಯಲ್ಲಿ ಇದುವರೆಗೆ 60 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಇಂದು ದಾಖಲಾದ ಪ್ರಕರಣಗಳಲ್ಲಿ ಉಡುಪಿ – 152, ಕುಂದಾಪುರ – 86 , ಕಾರ್ಕಳ -43, ಜಿಲ್ಲೆಯ ಹೊರಗಿನ – 1 ಪ್ರಕರಣಗಳಿವೆ.