ಉಡುಪಿ ಅಗಸ್ಟ್ 14: ಉಡುಪಿ ಜಿಲ್ಲೆಯಲ್ಲಿ ಇಂದು ಒಂದೇ ದಿನ 322 ಕೊರೊನಾ ಪ್ರಕರಣ ದಾಖಲಾಗಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೊಂಕಿತರ ಸಂಖ್ಯೆ 7497 ಕ್ಕೆ ಏರಿಕೆಯಾಗಿದೆ. ಉಡುಪಿಯಲ್ಲಿ ಇಂದು ಕೊರೊನಾದಿಂದಾಗಿ 5 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 4872 ಮಂದಿ ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಸದ್ಯ ಜಿಲ್ಲೆಯಲ್ಲಿ 2550 ಸಕ್ರಿಯ ಪ್ರಕರಣಗಳಿದ್ದು ಅದರಲ್ಲಿ 1301 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ 1249 ಮಂದಿ ಹೋಂ ಐಸೋಲೇಶನ್ ನಲ್ಲಿದ್ದಾರೆ. ಇಂದು ಉಡುಪಿಯಲ್ಲಿ ಕೊರೊನಾದಿಂದಾಗಿ ಇಂದು 5 ಮಂದಿ ಸಾವನಪ್ಪಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಇದುವರೆಗೆ 75 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಇಂದು ದಾಖಲಾದ ಪ್ರಕರಣಗಳಲ್ಲಿ ಉಡುಪಿ – 186, ಕುಂದಾಪುರ -95 , ಕಾರ್ಕಳ -36, ಜಿಲ್ಲೆಯ ಹೊರಗಿನ – 5 ಪ್ರಕರಣಗಳಿವೆ.