Connect with us

LATEST NEWS

ಉಡುಪಿ ಜಿಲ್ಲೆ ಇಂದು ಒಂದೇ ದಿನ 6 ಸಾವು ; 50ಕ್ಕೆ ಏರಿಕೆಯಾದ ಕೊರೊನಾ ಸಾವಿನ ಸಂಖ್ಯೆ

ಉಡುಪಿ ಅಗಸ್ಟ್ 6: ದಕ್ಷಿಣಕನ್ನಡ ಜಿಲ್ಲೆಯ ಬಳಿಕ ಉಡುಪಿ ಜಿಲ್ಲೆಯಲ್ಲೂ ಕೊರೊನಾ ಪ್ರಕರಣಗಳಲ್ಲಿ ಯಾವುದೇ ಇಳಿಕೆ ಕಂಡು ಬರುತ್ತಿಲ್ಲ. ಇಂದು ಜಿಲ್ಲೆಯಲ್ಲಿ ಬರೋಬ್ಬರಿ 217 ಮಂದಿಗೆ ಕೊರೊನಾ ಸೊಂಕು ಕಾಣಿಸಿಕೊಂಡಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೊಂಕಿತರ ಸಂಖ್ಯೆ 5360 ಕ್ಕೆ ಏರಿಕೆಯಾಗಿದೆ.


ಉಡುಪಿ ಜಿಲ್ಲೆಯಲ್ಲಿ ಒಟ್ಟು 3157 ಮಂದಿ ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಸದ್ಯ ಜಿಲ್ಲೆಯಲ್ಲಿ 2153 ಸಕ್ರಿಯ ಪ್ರಕರಣಗಳಿದ್ದು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಉಡುಪಿಯಲ್ಲಿ 6 ಮಂದಿ ಕೊರೊನೊದಿಂದಾಗಿ ಮೃತಪಟ್ಟಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಇದುವರೆಗೆ 50 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಇಂದು ದಾಖಲಾದ ಪ್ರಕರಣಗಳಲ್ಲಿ ಉಡುಪಿ – 90, ಕುಂದಾಪುರ – 81 , ಕಾರ್ಕಳ – 44, ಜಿಲ್ಲೆಯ ಹೊರಗಿನ – 2 ಪ್ರಕಣ.

Facebook Comments

comments