LATEST NEWS
ಉಡುಪಿ 9 ತಿಂಗಳ ತುಂಬು ಗರ್ಭಿಣಿಗೆ ಕೊರೊನಾ ಸೊಂಕು
ಉಡುಪಿ 9 ತಿಂಗಳ ತುಂಬು ಗರ್ಭಿಣಿಗೆ ಕೊರೊನಾ ಸೊಂಕು
ಉಡುಪಿ ಮೇ.24: ಕೊರೊನಾ ಪ್ರಕರಣಗಳಿಂದ ಇಂದು ಉಡುಪಿ ಜಿಲ್ಲೆ ತತ್ತರಿಸಿದೆ. ಇಂದು ಒಂದೇ ದಿನ ಉಡುಪಿ ಜಿಲ್ಲೆಯಲ್ಲಿ 23 ಪ್ರಕರಣ ದಾಖಲಾಗುವುದರೊಂದಿಗೆ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 76ಕ್ಕೆ ಏರಿಕೆಯಾಗಿದೆ. ಇಂದು ಬೆಳಿಗ್ಗಿನ ಹೆಲ್ತ್ ಬುಲೆಟಿನ್ ನಲ್ಲಿ 18 ಪ್ರಕರಣ ದಾಖಲಾಗಿತ್ತು. ಅದರಲ್ಲಿ ಮೂವರು ಪೊಲೀಸ್ ಸಿಬ್ಬಂದಿಗೆ ಕೊರೊನಾ ಸೊಂಕು ದೃಢ ಪಟ್ಟ ಹಿನ್ನಲೆ ಉಡುಪಿಯ ಮೂರು ಪೊಲೀಸ್ ಠಾಣೆಗಳನ್ನು ಈಗ ಸಂಪೂರ್ಣ ಸೀಲ್ ಡೌನ್ ಮಾಡಲಾಗಿದೆ.
ಸೋಂಕಿತರ ಸಂಪರ್ಕಕ್ಕೆ ಬಾರದ ಕಾರ್ಕಳ ತಾಲ್ಲೂಕಿನ 9 ತಿಂಗಳ ತುಂಬು ಗರ್ಭಿಣಿಯಲ್ಲಿ ಸೋಂಕು ಕಂಡುಬಂದಿದೆ. ಗರ್ಭಿಣಿಯ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರನ್ನು ಪತ್ತೆ ಹಚ್ಚಲು ಜಿಲ್ಲಾಡಳಿತ ಈಗ ಪ್ರಯತ್ನಿಸುತ್ತಿದೆ.
ಇನ್ನು ರಾಜ್ಯ ಸರಕಾರ ಸಂಜೆ ವೇಳೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ನಲ್ಲಿ ಉಡುಪಿ ಜಿಲ್ಲೆಯಲ್ಲಿ ಇಂದು ಮತ್ತೆ ಐದು ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಇದರಿಂದ ಕಳೆದ 24 ಗಂಟೆಯಲ್ಲಿ ಜಿಲ್ಲೆಯಲ್ಲಿ ಒಟ್ಟು 23 ಜನರಿಗೆ ಸೋಂಕು ತಾಗಿರುವುದು ದೃಢವಾಗಿದೆ.
ಈ ಮೂರು ಪ್ರಕರಣಗಳ ಪೈಕಿ ಮೂವರು ಮಹಾರಾಷ್ಟ್ರದಿಂದ ಬಂದವರಾಗಿದ್ದರೆ, ಓರ್ವ ತೆಲಂಗಾಣದ ಬಂದ ಪ್ರಯಾಣ ಇತಿಹಾಸ ಹೊಂದಿದ್ದಾರೆ. ಓರ್ವ ಮಹಿಳೆಯು ಯುಎಇನಿಂದ ಬಂದಿದ್ದು, ಅವರಿಗೆ ಸೋಂಕು ದೃಢಪಟ್ಟಿದೆ.
ಇಂದಿನ 23 ಪ್ರಕರಣಗಳು ಸೇರಿ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 76ಕ್ಕೆ ಏರಿಕೆಯಾಗಿದೆ. ಇವರಲ್ಲಿ ಮೂವರು ಗುಣಮುಖರಾಗಿ ಮನೆಗೆ ಮರಳಿದ್ದು, ಓರ್ವ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 130 ಹೊಸ ಸೋಂಕು ಪ್ರಕರಣಗಳು ದೃಢವಾಗಿದೆ. ಇದರೊಂದಿಗೆ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 2089ಕ್ಕೆ ಏರಿಕೆಯಾಗಿದೆ. ಇದರಲ್ಲಿ 654 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 42 ಮಂದಿ ಸೋಂಕಿನ ಕಾರಣದಿಂದ ಸಾವನ್ನಪ್ಪಿದ್ದಾರೆ. ಇಬ್ಬರು ಸೋಂಕಿತರು ಕೋವಿಡ್-19 ಅಲ್ಲದ ಕಾರಣದಿಂದ ಮರಣ ಹೊಂದಿದ್ದಾರೆ.