Connect with us

    UDUPI

    ಉಡುಪಿಯಲ್ಲಿ ಇಂದು 90 ಮಂದಿಗೆ ಕೊರೊನಾ ಸೊಂಕು

    ಉಡುಪಿ ಜುಲೈ 11: ಉಡುಪಿ ಜಿಲ್ಲೆಯಲ್ಲಿ ಮತ್ತೆ ಕೊರೊನಾ ಸ್ಪೋಟವಾಗಿದೆ. ಇಂದು ಜಿಲ್ಲೆಯಲ್ಲಿ ಬರೋಬ್ಬರಿ 90 ಮಂದಿಗೆ ಕೊರೊನಾ ಸೊಂಕು ಪತ್ತೆಯಾಗಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೊಂಕಿತರ ಸಂಖ್ಯೆ 1567ಕ್ಕೆ ಏರಿಕೆಯಾಗಿದೆ.
    ಜಿಲ್ಲೆಯಲ್ಲಿ ಇಂದು 663 ಗಂಟಲು ದ್ರವ ಮಾದರಿ ಪರೀಕ್ಷೆ ಮಾಡಲಾಗಿದೆ. ಅದರಲ್ಲಿ 90 ಜನರ ಸ್ಯಾಂಪಲ್ ಪಾಸಿಟಿವ್ ಬಂದಿದ್ದು, ಉಳಿದ 573 ಜನರ ವರದಿ ನೆಗೆಟಿವ್ ಆಗಿದೆ.


    ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 1567ಕ್ಕೆ ಏರಿಕೆಯಾಗಿದ್ದು, ಅದರಲ್ಲಿ 1245 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ಮೂವರು ಸೋಂಕಿತರು ಸಾವನ್ನಪ್ಪಿದ್ದಾರೆ. ಸದ್ಯ ಜಿಲ್ಲೆಯಲ್ಲಿ 319 ಸಕ್ರಿಯ ಪ್ರಕರಣಗಳಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಜಿಲ್ಲೆಯಲ್ಲಿ ದಾಖಲಾದ ಪ್ರಕರಣದಲ್ಲಿ ಕಾಪು ಪೊಲೀಸ್ ಠಾಣೆಯ ಎಎಸ್ಐ ಸೇರಿದಂತೆ 30ಕ್ಕೂ ಅಧಿಕ ಪ್ರಕರಣಗಳು ದೃಢಪಟ್ಟಿವೆ. ಕಾಪು ಪೊಲೀಸ್ ಠಾಣೆಯ 56 ವರ್ಷ ಪ್ರಾಯದ ಎಎಸ್ಐ ಗೆ ಸೋಂಕು ದೃಢಪಟ್ಟಿದೆ.

    Share Information
    Advertisement
    Click to comment

    You must be logged in to post a comment Login

    Leave a Reply