LATEST NEWS
ಉಡುಪಿ: ನೀರಿನ ಹೊಂಡಕ್ಕೆ ಬಿದ್ದು 5 ವರ್ಷದ ಮಗು ಕೊನೆಯುಸಿರು
ಉಡುಪಿ, ಜುಲೈ 14: ಆಟವಾಡುತ್ತಿದ್ದ ಮಗು ನೀರಿನ ಹೊಂಡಕ್ಕೆ ಬಿದ್ದು 5 ವರ್ಷದ ಮಗುವೊಂದು ಮೃತಪಟ್ಟ ದಾರುಣ ಘಟನೆ ಉಪ್ಪೂರು ಸಮೀಪದ ಕೆ.ಜಿ.ರೋಡ್ ಎಂಬಲ್ಲಿ ನಡೆದಿದೆ.
ನಾರ್ಮನ್ ಹಾಗೂ ಸಿಲ್ವಿಯಾ ದಂಪತಿಯ ಪುತ್ರ ಲಾರೆನ್ ಲೆವಿಸ್(5) ಮೃತ ಬಾಲಕ. ಬುಧವಾರ ಸಂಜೆ ಮನೆ ಸಮೀಪ ಆಟವಾಡುತ್ತಿದ್ದ ಮಗು ನಾಪತ್ತೆಯಾಗಿತ್ತೆನ್ನಲಾಗಿದೆ. ಹುಡುಕಾಟ ನಡೆಸಿದರೂ ಪತ್ತೆಯಾಗಿರಲಿಲ್ಲ. ಇಂದು ಬೆಳಗ್ಗೆ ಮನೆ ಸಮೀಪದ ನೀರಿನ ಹೊಂಡದಲ್ಲಿ ಮಗುವಿನ ಮೃತದೇಹ ಪತ್ತೆಯಾಗಿದೆ.
ಆಟ ಆಡುತ್ತಿದ್ದ ಮಗು ಆಕಸ್ಮಿಕವಾಗಿ ನೀರಿನ ಹೊಂಡಕ್ಕೆ ಬಿದ್ದು ಮುಳುಗಿ ಉಸಿರುಗಟ್ಟಿ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ. ನಾರ್ಮನ್ ಅವರ ಕುಟುಂಬ ಇತ್ತೀಚೆಗೆ ಕುವೈತ್ ನಿಂದ ರಜೆ ಹಿನ್ನೆಲೆಯಲ್ಲಿ ಊರಿಗೆ ಆಗಮಿಸಿತ್ತು ಎಂದು ತಿಳಿದುಬಂದಿದೆ. ಘಟನೆಯ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
You must be logged in to post a comment Login