LATEST NEWS
ಕಟಪಾಡಿ – ರಸ್ತೆ ದಾಟಲು ನಿಂತಿದ್ದ ವ್ಯಕ್ತಿ ಬೈಕ್ ಡಿಕ್ಕಿ….!!

ಉಡುಪಿ ಡಿಸೆಂಬರ್ 10: ರಸ್ತೆ ದಾಟಲು ನಿಂತಿದ್ದ ವ್ಯಕ್ತಿಯೊಬ್ಬರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿಯಲ್ಲಿ ನಡೆದಿದೆ. ಮೃತರನ್ನು ಕಟಪಾಡಿ ಏಣಗುಡ್ಡೆ ಅಗ್ರಹಾರದ ಸತೀಶ್ ಎಂದು ಗುರುತಿಸಲಾಗಿದೆ.
ಪಾದಾಚಾರಿ ಸತೀಶ್ ಕಟಪಾಡಿಯಲ್ಲಿ ರಸ್ತೆ ದಾಟುತ್ತಿರುವಾಗ ಬೈಕ್ ಢಿಕ್ಕಿ ಹೊಡೆದಿದ್ದು, ಈ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಉಡುಪಿಯ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆಂದು ಕರೆದೊಯ್ಯಲಾಗಿತ್ತು ಆದರೆ ಅಷ್ಟರಲ್ಲಿಯೇ ಮೃತಪಟ್ಟಿದ್ದಾರೆ. ಕಟಪಾಡಿ ಹೊರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
