ಉಡುಪಿ ಡಿಸೆಂಬರ್ 01: ಮೂರು ಕಾರುಗಳ ನಡುವೆ ನಡೆದ ಸರಣಿ ಅಪಘಾತದಲ್ಲಿ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳಿಂದ ಪಾರಾದ ಘಟನೆ ಕುರ್ಕಾಲು ಎಂಬಲ್ಲಿ ಭಾನುವಾರ ನಡೆದಿದೆ.

ಕಟಪಾಡಿಯಿಂದ ಶಿರ್ವ ಕಡೆಗೆ ತೆರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ತಿರುಗಿದೆ. ಈ ವೇಳೆ ಹಿಂದಿನಿಂದ ಬಂದ ಎರಡು ಕಾರುಗಳು ಸರಣಿ ಡಿಕ್ಕಿಯಾಗಿದೆ. ಕಾರುಗಳಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದೆ.