Connect with us

    KARNATAKA

    ಉಡುಪಿ: 13 ವರ್ಷಗಳ ಬಳಿಕ ಕರಾವಳಿಯಲ್ಲಿ ನಕ್ಸಲ್ ಎನ್​ಕೌಂಟರ್, ಹೆಬ್ರಿಯಲ್ಲಿ ANF ಗೆ ನಕ್ಸಲ್ ನಾಯಕ‌ ವಿಕ್ರಂ ಗೌಡ ಬಲಿ..!

    13 ವರ್ಷಗಳ ಬಳಿಕ ಕರಾವಳಿಯಲ್ಲಿ ಗುಂಡಿನ ಮೊರೆತ ಕೇಳಿಬಂದಿದ್ದು ನಕ್ಸಲ್ ಎನ್​ಕೌಂಟರ್ ನಡೆದಿದ್ದು ಉಡುಪಿಯ ಹೆಬ್ರಿಯಲ್ಲಿ ANF ಗೆ ನಕ್ಸಲ್ ನಾಯಕ‌ ವಿಕ್ರಂ ಗೌಡ ಬಲಿಯಾಗಿದ್ದಾನೆ

    ಉಡುಪಿ : 13 ವರ್ಷಗಳ ಬಳಿಕ ಕರಾವಳಿಯಲ್ಲಿ ಗುಂಡಿನ ಮೊರೆತ ಕೇಳಿಬಂದಿದ್ದು ನಕ್ಸಲ್ ಎನ್​ಕೌಂಟರ್ ನಡೆದಿದ್ದು ಉಡುಪಿಯ ಹೆಬ್ರಿಯಲ್ಲಿ ANF ಗೆ ನಕ್ಸಲ್ ನಾಯಕ‌ ವಿಕ್ರಂ ಗೌಡ ಬಲಿಯಾಗಿದ್ದಾನೆ.

    ಕರ್ನಾಟಕದ ಪಶ್ಚಿಮ ಘಟ್ಟ ತಪ್ಪಲಿನ ಅರಣ್ಯದಂಚಿನ ಪ್ರದೇಶಗಳಲ್ಲಿ ನಕ್ಸಲ್ ನಿಗ್ರಹ ಕಾರ್ಯಾಚರಣೆ ತೀವ್ರಗೊಂಡಿದ್ದು, ಉಡುಪಿ ಜಿಲ್ಲೆಯ ಹೆಬ್ರಿ ಠಾಣೆ ವ್ಯಾಪ್ತಿಯ ಕಬ್ಬಿನಾಲೆಯಲ್ಲಿ ಎನ್​ಕೌಂಟರ್ ನಡೆದಿದೆ.ಕಬ್ಬಿನಾಲೆ ಅರಣ್ಯದಲ್ಲಿ ನಡೆದ ಎನ್​ಕೌಂಟರ್​ನೊಂದಿಗೆ ಉಡುಪಿ ಭಾಗದಲ್ಲಿ 13 ವರ್ಷಗಳ ನಂತರ ಗುಂಡಿನ ಮೊರತೆ ಕೇಳಿದಂತಾಗಿದೆ.

    ಸೋಮವಾರ ರಾತ್ರಿ ಐದು ಮಂದಿ ಇದ್ದ ನಕ್ಸಲರ ತಂಡ ಗ್ರಾಮಕ್ಕೆ ದಿನಸಿ ಸಾಮಗ್ರಿ ಖರೀದಿಗೆಂದು ಬಂದಿದ್ದಾಗ ನಕ್ಸಲ್ ನಿಗ್ರಹ ಪಡೆ ಕಾರ್ಯಾಚರಣೆ ನಡೆಸಿದೆ. ಅಷ್ಟರಲ್ಲಿ ನಕ್ಸಲರು ಪೊಲೀಸರ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ನಡೆದ ಎನ್​ಕೌಂಟರ್​​ನಲ್ಲಿ ವಿಕ್ರಂ ಗೌಡ ಹತನಾದರೆ, ಉಳಿದ ನಕ್ಸಲರು ಪರಾರಿಯಾಗಿದ್ದಾರೆ. ನಕ್ಸಲ್ ನಾಯಕ ವಿಕ್ರಂ ಗೌಡ ಎಂಬಾತನನ್ನು ನಕ್ಸಲ್ ನಿಗ್ರಹ ಪಡೆ ಹತ್ಯೆ ಮಾಡಿದೆ.  ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ವ್ಯಾಪ್ತಿಯ ದಟ್ಟಾರಣ್ಯದಲ್ಲಿ, ಅರಣ್ಯದಂಚಿನ ಗ್ರಾಮಗಳಲ್ಲಿ ನಕ್ಸಲ್ ಚಟುವಟಿಕೆ ಮತ್ತೆ ಆರಂಭವಾಗಿರುವ ಕಾರಣ ನಕ್ಸಲ್ ನಿಗ್ರಹ ಪಡೆ ಕಾರ್ಯಾಚರಣೆ ಕಳೆದ ಕೆಲವು ದಿನಗಳಿಂದ ತೀವ್ರಗೊಂಡಿತ್ತು. ಇದೀಗ ಉಡುಪಿ ಜಿಲ್ಲೆಯಲ್ಲಿ ಗುಂಡಿನ ಮೊರೆತ ಕೇಳಿದೆ. ಉಡುಪಿ ಜಿಲ್ಲೆಯ ಹೆಬ್ರಿ ಠಾಣೆ ವ್ಯಾಪ್ತಿಯ ಕಬ್ಬಿನಾಲೆ ಅರಣ್ಯ ಪ್ರದೇಶದಲ್ಲಿ ಸೋಮವಾರ ರಾತ್ರಿ ನಡೆದ ಎನ್​ಕೌಂಟರ್​ನಲ್ಲಿ ನಕ್ಸಲ್ ನಾಯಕ‌ ವಿಕ್ರಂ ಗೌಡ ಹತನಾಗಿದ್ದಾನೆ. ನಕ್ಸಲ್ ನಾಯಕ ವಿಕ್ರಂ ಗೌಡ ಕಬ್ಬಿನಾಲೆ ಮೂಲದವನಾಗಿದ್ದಾನೆ. ಕಳೆದ ಕೆಲವು ದಿನಗಳಿಂದ ಈ ಭಾಗದಲ್ಲಿ ನಕ್ಸಲ್ ಚಟುವಟಿಕೆ ಬಿರುಸುಗೊಂಡಿತ್ತು. ಹೀಗಾಗಿ ನಕ್ಸಲ್ ನಿಗ್ರಹ ಪಡೆ ಕಾರ್ಯಾಚರಣೆ ಆರಂಭಿಸಿತ್ತು.

    ಇತ್ತೀಚೆಗೆ ಕೆಲವು ದಿನಗಳ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ, ಸುಳ್ಯ ಭಾಗದಲ್ಲಿ ಕೆಲವು ಗ್ರಾಮಗಳಿಗೆ ನಕ್ಸಲರು ಭೇಟಿ ನೀಡಿದ ಬಗ್ಗೆ ವರದಿಯಾಗಿತ್ತು. ಅದೇ ರೀತಿ, ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಕೆಲವೆಡೆ ನಕ್ಸಲರು ಭೇಟಿ ನೀಡಿದ ಸುಳಿವು ದೊರೆತಿತ್ತು. ಕೊಪ್ಪ ತಾಲೂಕಿನ ಕಡೆಗುಂಡಿ ಗ್ರಾಮದ ಸುಬ್ಬೆಗೌಡ ಎಂಬವರ ಮನೆಯಲ್ಲಿ 3 ಬಂದೂಕುಗಳು ಪತ್ತೆಯಾಗಿದ್ದವು. ಆ ಮನೆಗೆ ನಕ್ಸಲ್ ನಾಯಕಿ ಮುಂಗಾರು ಲತಾ ಮತ್ತು ಆಕೆಯ ತಂಡ ಭೇಟಿ ನೀಡಿರುವ ಸುಳಿವು ಸಿಕ್ಕಿತ್ತು.

    ನಂತರ ನಕ್ಸಲರ್ ನಿಗ್ರಹ ಪಡೆ ಕಾರ್ಯಾಚರಣೆ ತೀವ್ರಗೊಳಿಸಿದೆ.ಅರಣ್ಯ ಒತ್ತುವರಿ ತೆರವು, ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ನಕ್ಸಲರು ಕೊಪ್ಪ, ಶೃಂಗೇರಿ ತಾಲೂಕಿನಲ್ಲಿ ಸಭೆಗಳನ್ನು ನಡೆಸಿರುವ ಶಂಕೆ ವ್ಯಕ್ತವಾಗಿತ್ತು. ಇದೇ ಕಾರಣದಿಂದ ಮಲೆನಾಡು ಹಾಗೂ ಕರವಾಳಿ ಭಾಗದ ಪಶ್ಚಿಮ ಘಟ್ಟದ ಅಂಚಿನ ಗ್ರಾಮಗಳಲ್ಲಿ ನಕ್ಸಲ್ ಚಟುವಟಿಕೆ ಮತ್ತೆ ಹೆಚ್ಚಾಗುತ್ತಿರುವ ಅನುಮಾನ ಇದೆ.

     

     

    Share Information
    Advertisement
    Click to comment

    Leave a Reply

    Your email address will not be published. Required fields are marked *