Connect with us

LATEST NEWS

ಉಡುಪಿಯಲ್ಲಿ ವ್ಯಕ್ತಿಯೊಬ್ಬ ಸಂಶಯಾಸ್ಪದ ಸಾವು – ಕೊರೊನಾ ಪರೀಕ್ಷೆ ನಡೆಸಿದ ಜಿಲ್ಲಾಡಳಿತ

ಉಡುಪಿಯಲ್ಲಿ ವ್ಯಕ್ತಿಯೊಬ್ಬ ಸಂಶಯಾಸ್ಪದ ಸಾವು – ಕೊರೊನಾ ಪರೀಕ್ಷೆ ನಡೆಸಿದ ಜಿಲ್ಲಾಡಳಿತ

ಉಡುಪಿ ಮೇ.17: ಉಡುಪಿಯಲ್ಲಿ ವ್ಯಕ್ತಿಯೊಬ್ಬ ಸಂಶಯಾಸ್ಪದವಾಗಿ ಸಾವನಪ್ಪಿರುವ ಘಟನೆ ನಡೆದಿದ್ದು, ಕೊರೊನಾ ಲಕ್ಷಣಗಳ ಹಿನ್ನಲೆ ಮೃತ ವ್ಯಕ್ತಿಯ ಗಂಟಲು ದ್ರವವನ್ನು ಕೊರೊನಾ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಉಡುಪಿ ಡಿಎಚ್ ಓ ಸುಧೀರ್ ಚಂದ್ರ ಸೂಡಾ ಮಾಹಿತಿ ತಿಳಿಸಿದ್ದಾರೆ.

ಉಡುಪಿ ನಗರದ ಬನ್ನಂಜೆ ವಾರ್ಡ್ ನಿವಾಸಿಯೊಬ್ಬರು ಕಳೆದ ಮೂರು ದಿನದಿಂದ ಶೀತ, ಕೆಮ್ಮು ಜ್ವರದಿಂದ ಬಳಲುತ್ತಿದ್ದರು ಈ ಹಿನ್ನಲೆ ಇಂದು ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಾಗುವಷ್ಟರಲ್ಲಿ ವ್ಯಕ್ತಿ ಮೃತಪಟ್ಟಿದ್ದಾರೆ.

ಸಂಶಯಾಸ್ಪದ ಸಾವಿನ ಹಿನ್ನೆಲೆಯಲ್ಲಿ ಗಂಟಲ ದ್ರವ ತೆಗೆದು ಕೊವಿಡ್ ಪರೀಕ್ಷೆಗೆ ರವಾನಿಸಲಾಗಿದ್ದು, ಸದ್ಯ ಕೋವಿಡ್ ಲಕ್ಷಣ ಇದ್ದ ಕಾರಣ ವರದಿಗಾಗಿ ವೈದ್ಯರು ಕಾಯುತ್ತಿದ್ದಾರೆ. ಮೇಲ್ನೋಟಕ್ಕೆ ಹೃದಯಾಘಾತದಿಂದ ಮೃತರಾಗಿರುವ ಸಾದ್ಯತೆ ಇದೆ ಎಂದು ಡಿಎಚ್ ಓ ತಿಳಿಸಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಕೋವಿಡ್ ಟೆಸ್ಟ್ ಮಾಡಿಸಲಾಗುತ್ತಿದೆ.

Facebook Comments

comments