Connect with us

    LATEST NEWS

    ಉಡುಪಿ : ಸಿದ್ದಾಪುರ ವ್ಯವಸಾಯ ಸೇವಾ ಸಹಕಾರಿ ಸಂಘದ ಪ್ರಭಾರ ವ್ಯವಸ್ಥಾಪಕಿ ಆಶಾ ಆತ್ಮಹತ್ಯೆ..!!

    ಉಡುಪಿ: ಉಡುಪಿ ಜಿಲ್ಲೆಯ ಸಿದ್ದಾಪುರ ವ್ಯವಸಾಯ ಸೇವಾ ಸಹಕಾರಿ ಸಂಘದ ಪ್ರಭಾರ ವ್ಯವಸ್ಥಾಪಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಶಾ ಎಸ್ (52) ಜೀವಾಂತ್ಯ ಮಾಡಿಕೊಂಡ ಮಹಿಳೆಯಾಗಿದ್ದಾರೆ. ಆಶಾ ಬುಧವಾರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.
    ಸಿದ್ದಾಪುರ ವ್ಯವಸಾಯ ಸೇವಾ ಸಹಕಾರಿ ಸಂಘದ ಪ್ರಭಾರ ವ್ಯವಸ್ಥಾಪಕಿಯಾಗಿದ್ದ ಆಶಾ ಅವರು ಬುಧವಾರ ಬೆಳಗ್ಗೆ ಕರ್ತವ್ಯಕ್ಕೆ ಹಾಜರಾಗಿದ್ದರು ಬಳಿಕ ಅಪರಾಹ್ನ ಕಚೇರಿಯಿಂದ ಯಾರಿಗೂ ತಿಳಿಸದೆ ನೇರವಾಗಿ ಮನೆಗೆ ಹೋಗಿ, ಮಹಡಿಯ ಕೋಣೆಯಲ್ಲಿ ಹಗ್ಗದಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ಬ್ಯಾಂಕ್ ಮೂಲಗಳ ಪ್ರಕಾರ ಆಶಾ ಅವರು ತಮ್ಮ ಚಿನ್ನವನ್ನು ಪತಿಯ ಹೆಸರಿನಲ್ಲಿ ಸಂಘದಲ್ಲಿ ಅಡವಿಟ್ಟು ಸಾಲ ಪಡೆದಿದ್ದರು. ಚಿನ್ನವನ್ನು ಲಾಕರ್‌ನಲ್ಲಿ ಇಡುವ ಜವಾಬ್ದಾರಿಯನ್ನು ಅವರೇ ನಿಭಾಯಿಸುತ್ತಿದ್ದರು. ಬುಧವಾರ ಅಡಿಟ್‌ ನಡೆಯುವಾಗ ಅವರು ಅಡವಿಟ್ಟ ಚಿನ್ನ ಲಾಕರ್‌ನಲ್ಲಿ ಇಲ್ಲದಿರುವುದನ್ನು ಆಶಾ ಅವರಲ್ಲಿ ವಿಚಾರಿಸಲಾಗಿದೆ. ಚಿನ್ನ ಇಲ್ಲದಿರುವ ವಿಚಾರ ಹೊರಗಡೆಗೆ ಬಂದು ಅವಮಾನವಾಗುತ್ತದೆ ಎಂದು ಹೆದರಿ, ಕಚೇರಿಯಲ್ಲಿ ಯಾರಿಗೂ ಹೇಳದೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ ಎಂದಿದ್ದಾರೆ.

    ಆಶಾ ಅವರು ಕಚೇರಿಯಲ್ಲಿ ಇಲ್ಲದಿರುವುದು ಗೊತ್ತಾದ ಬಳಿಕ ಹುಡುಕಾಟ ನಡೆಸಲಾಗಿತ್ತು. ಕೊನೆಯಲ್ಲಿ ಸಿಸಿ ಟಿವಿ ನೋಡಿದಾಗ, ಮನೆಯ ಕಡೆಗೆ ಸ್ಕೂಟಿ ತೆಗೆದುಕೊಂಡು ಹೋಗುತ್ತಿರುವುದು ಗೊತ್ತಾಗಿದೆ. ಕೂಡಲೇ ಮಹೇಶ್‌ ಹಾಗೂ ಸಿಬಂದಿ ಮಂಜುನಾಥ ಅವರು ಆಶಾ ಅವರ ಮನೆಗೆ ಬಂದು ನೋಡಿದಾಗ ಅವರು ನೇಣುಬಿಗಿದುಕೊಂಡಿದ್ದರು. ಆಶಾ ಅವರ ತಾಯಿ ಬೊಬ್ಬೆ ಹಾಕಿದಾಗ ಸ್ಥಳೀಯರು ಬಂದು ಬಾಗಿಲು ಒಡೆದು ನೇಣಿನಿಂದ ಆಶಾ ಅವರನ್ನು ಕೆಳಗೆ ಇಳಿಸಿ, ಕೂಡಲೇ ಸಿದ್ದಾಪುರ ಸರಕಾರಿ ಆಸ್ಪತ್ರೆಗೆ  ಬಳಿಕಅಲ್ಲಿಂದ ಮಣಿಪಾಲದ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ  ದಾರಿ ಮಧ್ಯೆ ಸಾವನ್ನಪ್ಪಿದರು.

    ಆಶಾ ಅವರಿಗೆ ಇಬ್ಬರು ಮಕ್ಕಳು. ಪುತ್ರ ಮದುವೆಯಾಗಿ ಯುಎಸ್‌ಎಯಲ್ಲಿ ಉದ್ಯೋಗದಲ್ಲಿದ್ದಾರೆ. ಪುತ್ರಿ ಉನ್ನತ ವ್ಯಾಸಂಗ ಮಾಡುತ್ತಿದ್ದರು. ಆತ್ಮಹತ್ಯೆಯ ಕೆಲವು ಕ್ಷಣಗಳ ಮೊದಲು ಮಗಳಿಗೆ ಸಾರೀ ಮಗಳೆ ಎಂದು ಮೆಸೇಜ್‌ ಮಾಡಿದ್ದರು ಎಂದು ತಿಳಿದುಬಂದಿದೆ. ಮನೆಗೆ ಬಂದಿದ್ದ ಆಶಾ ಮೊದಲು ತಾಯಿಯ ಹತ್ತಿರ ನೀನು ಊಟ ಮಾಡು. ನನಗೆ ಸೊಸೈಟಿಯ ಕೆಲಸ ಇದೆ. ನಾನು ಮಹಡಿಯ ಮೇಲಿನ ರೂಂನಲ್ಲಿ ಇರುತ್ತೇನೆ. ನನ್ನನ್ನು ಕರೆಯಬೇಡ ಎಂದು ಹೇಳಿದ್ದರು ತಾಯಿ ಹೇಳಿಕೆ ನೀಡಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply