Connect with us

    LATEST NEWS

    ನಗರಸಭೆ ಕಾರ್ಮಿಕನ ಮೇಲೆ ಹಲ್ಲೆ ನಡೆಸಿದ ಎಲೆಕ್ಟ್ರಾನಿಕ್ಸ್ ಶಾಪ್ ಮಾಲೀಕನ ಪರವಾನಿಗೆ ರದ್ದು

    ಉಡುಪಿ ಮಾರ್ಚ್ 15: ಕಸ ವಿಲೇವಾರಿ ಸಂಬಂಧ ನಗರಸಭೆ ಕಾರ್ಮಿಕನೊಬ್ಬರಿಗೆ ನಡು ರಸ್ತೆಯಲ್ಲೇ ಹಲ್ಲೆ ನಡೆಸಿದ್ದ ಅಂಗಡಿ ಮಾಲಕರ ವಿರುದ್ದ ಉಡುಪಿ ನಗರಸಭೆ ಕಠಿಣ ಕ್ರಮಕ್ಕೆ ಮುಂದಾಗಿದ್ದು. ಎಲೆಕ್ಟ್ರಾನಿಕ್ಸ್ ಶಾಪ್ ಮಾಲೀಕನ ಪರವಾನಿಗೆಯನ್ನು ರದ್ದುಗೊಳಿಸಿದೆ.


    ಉಡುಪಿ ನಗರಸಭೆಯಲ್ಲಿ ಇಂದು ನಡೆದ ತುರ್ತು ಖಂಡನಾ ನಿರ್ಣಯ ಸಭೆಯಲ್ಲಿ ಆರೋಪಿಗಳಿಗೆ ಸಂಬಂಧಿಸಿದ ಆಸ್ಮಾ ಕ್ಯಾಸೆಟ್ ಕಾರ್ನರ್ ಅಂಗಡಿಯ ವ್ಯಾಪಾರ ಪರವಾನಿಗೆ ರದ್ದು ಮಾಡಲು ನಿರ್ಣಯಿಸಲಾಯ್ತು.

    ನಗರಸಭೆ ಅಧಿಕಾರಿಗಳು, ಸಿಬ್ಬಂದಿ, ಸ್ವಚ್ಛತಾ ಸಿಬ್ಬಂದಿ, ಗುತ್ತಿಗೆ ನೌಕರರ ರಕ್ಷಣೆಗೆ ಆಡಳಿತ ವಿಭಾಗ ಬದ್ಧವಾಗಿದ್ದು, ಕೆಲವರು ಅನಗತ್ಯವಾಗಿ ನಗರಸಭೆ ವಿರುದ್ಧ ಪೌರಕಾರ್ಮಿಕರನ್ನು ಎತ್ತಿಕಟ್ಟುವ ಕಾರ್ಯ ಮಾಡುತ್ತಿದ್ದಾರೆ. ಪ್ರತಿಭಟನೆಗೆ ಕುಮ್ಮಕ್ಕು ನೀಡುತ್ತಿದ್ದಾರೆ. ಷಡ್ಯಂತ್ರಕ್ಕೆ ಅವಕಾಶ ಇಲ್ಲ ಎಂದು ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಯ್ತು.

    ಈ ಸಂದರ್ಭದಲ್ಲಿ ಶಾಸಕ ರಘುಪತಿ ಭಟ್ ಮಾತನಾಡಿ, ಸರ್ಕಾರಿ ಅಧಿಕಾರಿಗಳ ವಿರುದ್ಧ ದುವರ್ತನೆ ತೋರಿದರೆ ಪಕ್ಷಭೇದವಿಲ್ಲದೆ ನಿರ್ದಾಕ್ಷಿಣ್ಯಕ್ರಮ ಕೈಗೊಳ್ಳಲಾಗುವುದು. ನ್ಯಾಯಾಂಗ ಬಂಧನದಲ್ಲಿರುವ ಆರೋಪಿಗಳನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ. ವಿರೋಧ ಪಕ್ಷದ ಸದಸ್ಯರು ಬೀದಿಯಲ್ಲಿ ನಿಂತು ಮಾತನಾಡುವ ಬದಲು ಅಧಿವೇಶನಕ್ಕೆ ಬಂದು ತಮ್ಮ ಅಭಿಪ್ರಾಯ ಮಂಡಿಸಬೇಕಿತ್ತು ಎಂದರು.

    Share Information
    Advertisement
    Click to comment

    You must be logged in to post a comment Login

    Leave a Reply