LATEST NEWS
ಹಿಜಬ್ ಹೋರಾಟಗಾರ್ತಿಯ ಅಣ್ಣನ ಮೇಲೆ ಹಲ್ಲೆ..ತಂದೆ ಹೋಟೆಲ್ ಗೆ ಕಲ್ಲು ತೂರಾಟ

ಉಡುಪಿ ಫೆಬ್ರವರಿ 22: ಕಾಲೇಜು ತರಗತಿಗಳಲ್ಲಿ ಹಿಜಬ್ ಧರಿಸಲು ಅವಕಾಶಕ್ಕಾಗಿ ಹೈಕೋರ್ಟ್ ಮೆಟ್ಟಿಲೇರಿರುವ ವಿಧ್ಯಾರ್ಥಿನಿಯೊಬ್ಬಳ ತಂದೆಯ ಹೋಟೆಲ್ ಮೇಲೆ ದುಷ್ಕರ್ಮಿಗಳ ತಂಡ ಕಲ್ಲು ತೂರಾಟ ನಡೆಸಿ ಸಹೋದರನಿಗೆ ಹಲ್ಲೆ ನಡೆಸಿರುವ ಘಟನೆ ಉಡುಪಿಯಲ್ಲಿ ನಡೆದಿದೆ.
ಹಲ್ಲೆಗೊಳಗಾದ ಯುವಕನನ್ನು ಸೈಫ್ ಎಂದು ಗುರುತಿಸಲಾಗಿದ್ದು, ಮಲ್ಪೆಯಲ್ಲಿರುವ ಹೈದರ್ ಅಲಿ ಎಂಬವರ ಬಿಸ್ಮಿಲ್ಲಾ ಹೋಟೆಲ್‍ಗೆ ಆಗಮಿಸಿದ 70 -100 ಮಂದಿ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಬಳಿಕ ದುಷ್ಕರ್ಮಿಗಳು ಹೊಟೇಲ್‍ನಲ್ಲಿದ್ದ ಅವರ ಮಗ ಸೈಪ್(20) ಮೇಲೂ ಹಲ್ಲೆ ನಡೆಸಿದ್ದಾರೆ. ಘಟನೆಯಲ್ಲಿ ಹೋಟೆಲಿನ ಗಾಜುಗಳು ಪುಡಿಯಾಗಿದೆ.

ಹಲ್ಲೆಗೆ ಒಳಗಾಗಿರುವ ಸೈಫ್‍ನನ್ನು ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದೆ. ಸ್ಥಳಕ್ಕೆ ಮಲ್ಪೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ ಕೇಸು ದಾಖಲಿಸಿಕೊಂಡಿದ್ದಾರೆ. ಈ ಬಗ್ಗೆ ಹಿಜಬ್ ದೂರುದಾರೆ ಹಜ್ರಾ ಶಿಫಾ ಟ್ವೀಟ್ ಮಾಡಿ, ಹಿಜಬ್‍ನ್ನು ಮುಂದುವರಿಸಿದ್ದಕ್ಕಾಗಿ ನನ್ನ ಅಣ್ಣನ ಮೇಲೆ ಹಾಗೂ ಹೊಟೇಲ್ ಮೇಲೆ ದಾಳಿಯಾಗಿದೆ. ನಮ್ಮ ಹಕ್ಕುಗಳಿಗಾಗಿ ಹೋರಾಡುವುದು ತಪ್ಪೇ ಎಂದು ಪ್ರಶ್ನಿಸಿದ ಅವರು, ಸಂಘಪರಿವಾರದ ಯುವಕರಿಂದ ಹಲ್ಲೆ ಎಂಬ ಆರೋಪಿಸಿದ್ದಾರೆ.