Connect with us

    LATEST NEWS

    ಜನವರಿ 20 ರಿಂದ 22 ರಜತ ಉಡುಪಿ-ಬೀಚ್ ಉತ್ಸವ

    ಉಡುಪಿ, ಜನವರಿ 19: ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ರಜತ ಉಡುಪಿ- ಬೀಚ್ ಉತ್ಸವ ಕಾರ್ಯಕ್ರಮವು ಜನವರಿ 20 ರಿಂದ 22 ರ ವರೆಗೆ ಮಲ್ಪೆಯಲ್ಲಿ ನಡೆಯಲಿದೆ.
    ಕಾರ್ಯಕ್ರಮವನ್ನು ರಾಜ್ಯದ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಉದ್ಘಾಟಿಸಲಿದ್ದು, ಶಾಸಕ ಕೆ ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ.


    ಕಾರ್ಯಕ್ರಮದಲ್ಲಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನೀಲ್ ಕುಮಾರ್, ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಮತ್ತಿತರರು ಭಾಗವಹಿಸಲಿದ್ದಾರೆ.

     

    Share Information
    Advertisement
    Click to comment

    You must be logged in to post a comment Login

    Leave a Reply