ಉಡುಪಿ ಫೆಬ್ರವರಿ 18: ಎರಡು ದ್ವಿಚಕ್ರವಾಹನಗಳ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಬೈಕ್ ಸವಾರ ಸಾವನಪ್ಪಿದ ಘಟನೆ  ಅಜ್ಜರಕಾಡು ಅಗ್ನಿ ಶಾಮಕ ದಳ ಠಾಣೆಯ ಸಮೀಪ ಸೋಮವಾರ  ರಾತ್ರಿ ಸಂಭವಿಸಿದೆ.
ಮೃತರನ್ನು ಸ್ಯಾಮುಯೆಲ್ ಸದಾನಂದ ಕರ್ಕಡ(59) ಎಂದು ಗುರುತಿಸಲಾಗಿದೆ. ಅತಿ ವೇಗದಿಂದ ಬಂದ ಎರಡು ಬೈಕ್ ಗಳು ಮುಖಾಮುಖಿ ಢಿಕ್ಕಿಯಾದ ಪರಿಣಾಮ ಸದಾನಂದ ರಸ್ತೆಗೆ ಬಿದ್ದರೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟರೆಂದು ತಿಳಿದು ಬಂದಿದೆ. ಅಪಘಾತದಿಂದ ಎರಡು ಬೈಕ್ ಗಳು ಕೂಡ ಸಂಪೂರ್ಣ ನಜ್ಜುಗುಜ್ಜಾಗಿವೆ. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
https://youtu.be/ZQY35UX_hUI
Share Information