Connect with us

    LATEST NEWS

    ಕಾರ್ಕಳ- ಬೈಕ್ ಸ್ಕಿಡ್ ಆಗಿ ಇಂಜಿನಿಯರಿಂಗ್ ವಿಧ್ಯಾರ್ಥಿ ಸಾವು

    ಉಡುಪಿ ಫೆಬ್ರವರಿ 23: ಬೈಕ್ ಸ್ಕಿಡ್ ಆದ ಪರಿಣಾಮ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಸಾವನಪ್ಪಿ ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಪರ್ಪಲೆ ಗುಡ್ಡದ ತಿರುವಿನಲ್ಲಿ ಸಂಭವಿಸಿದೆ.


    ಮೃತರನ್ನು ಬ್ರಹ್ಮಾವರ ನಿವಾಸಿ ಆಕಾಶ್ ಕಾಂಚನ್(18) ಗುರುತಿಸಲಾಗಿದೆ. ಈತ ನಿಟ್ಟೆಯ ಖಾಸಗಿ ಕಾಲೇಜಿನಲ್ಲಿ ಮೆಕ್ಯಾನಿಕ್ ಇಂಜಿನಿಯರಿಂಗ್ ಓದುತಿದ್ದ ಇವರು ಕಾಲೇಜಿನಲ್ಲಿ ವಾರ್ಷಿಕೋತ್ಸವ ಇದ್ದ ಕಾರಣ ಸ್ನೇಹಿತರೊಡಗೂಡಿ ಪ್ರತ್ಯೇಕ ಬೈಕ್‌ಗಳಲ್ಲಿ ತೆರಳುತಿದ್ದ ವೇಳೆ ಘಟನೆ ಸಂಭವಿಸಿದೆ.

    ಘಟನೆಯಲ್ಲಿ ಸವಾರ, ಸಹಸವಾರ ವಿದ್ಯಾರ್ಥಿಗಳಿಬ್ಬರು ರಸ್ತೆಗೆ ಎಸೆಯಲ್ಪಟ್ಟು ಆಕಾಶ್ ಗಂಭೀರ ಗಾಯಗೊಂಡು ಮೃತಪಟ್ಟರೆ, ಸಹಸವಾರ ವಿದ್ಯಾರ್ಥಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply