Connect with us

LATEST NEWS

ಉಡುಪಿ ಬಿಷಪ್ ರಿಂದ ಕರೋನಾ ಜಾಗೃತಿ ಕ್ಲಾಸ್

ಉಡುಪಿ ಬಿಷಪ್ ರಿಂದ ಕರೋನಾ ಜಾಗೃತಿ ಕ್ಲಾಸ್

ಉಡುಪಿ ಮಾರ್ಚ್ 15:ಜಗತ್ತಿಗೆ ಕಂಟಕವಾಗಿ ಕರೋನಾ ವೈರಸ್ ಮಾರ್ಪಟ್ಟಿದೆ. ಈ ಕರೋನಾ ವೈರಸ್ ಕರ್ನಾಟಕಕ್ಕೂ ಕಾಲಿಟ್ಟಿರುವುದರಿಂದ ರಾಜ್ಯ ಸರಕಾರ ಈಗಾಗಲೇ ಒಂದು ವಾರ ಹೈ ಅಲರ್ಟ್ ಘೋಷಿಸಿದೆ. ಈ ನಡುವೆ ಧಾರ್ಮಿಕ ಕೇಂದ್ರಗಳಲ್ಲಿ ಕರೋನಾ ವೈರಸ್ ಕುರಿತಂತೆ ಜಾಗೃತಿ ಮೂಡಿಸಲಾಗುತ್ತಿದೆ.

ಕರ್ನಾಟಕದಲ್ಲಿ ಕರೋನಾ ವೈರಸ್ ಕುರಿತಂತೆ ಹೆಚ್ಚು ಸುದ್ದಿಯಾಗುತ್ತಿರುವುದು ಉಡುಪಿ ಜಿಲ್ಲೆಯಲ್ಲೇ ಈ ಹಿನ್ನಲೆಯಲ್ಲಿ ಉಡುಪಿಯ ಕ್ರೈಸ್ತ ಧರ್ಮ ಪ್ರಾಂತ್ಯದಲ್ಲಿ ಬರುವ ಎಲ್ಲಾ ಚರ್ಚ್ ಗಳಲ್ಲಿ ಕೊರೊನಾ ಜಾಗೃತಿ ಮೂಡಿಸಬೇಕೆಂದು ಜೆರಾಲ್ಡ್ ಐಸಾಕ್ ಲೋಬೊ ಆದೇಶ ಹೊರಡಿಸಿದ್ದಾರೆ.

ಶನಿವಾರ ಮತ್ತು ಭಾನುವಾರದ ವಿಶೇಷ ಪ್ರಾರ್ಥನೆಯ ವೇಳೆ ಧರ್ಮಗುರುಗಳು ಚರ್ಚ್ ನಲ್ಲಿ ಕೊರೊನಾ ಸೋಂಕಿನ ಬಗ್ಗೆ ಮತ್ತು ಜನ ಜಾಗೃತಿಯ ಬಗ್ಗೆ ಕಿವಿಮಾತು ಹೇಳಿದ್ದಾರೆ. ಚರ್ಚ್ ಗಳಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಮನೆಗಳಲ್ಲಿ ಯಾವ ರೀತಿ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು ಎಂದು ಪಾಠ ಮಾಡಿದ್ದಾರೆ.

ಗಲ್ಫ್ ರಾಷ್ಟ್ರಗಳಲ್ಲಿ ಇರುವ ಕ್ರೈಸ್ತ ಧರ್ಮೀಯರು ಕೆಲ ಕಾಲ ಅಲ್ಲೇ ಇದ್ದು, ವೈರಸ್ ಭೀತಿ ನಿವಾರಣೆಯಾದ ಮೇಲೆ ಭಾರತಕ್ಕೆ ವಾಪಸ್ ಬರುವಂತೆ ಕರೆ ನೀಡಿದ್ದಾರೆ. ಕೊರೊನಾ ವಿರುದ್ಧ ಮನುಷ್ಯರಿಗೆ ಹೋರಾಡಲು ವಿಶೇಷ ಶಕ್ತಿ ಬರುವಂತೆ ಬೈಬಲ್‍ನ ಕೆಲ ಅಧ್ಯಾಯಗಳ ಪಾಠವನ್ನು ಭಾನುವಾರದ ಪಾರ್ಥನೆಯ ಸಂದರ್ಭದಲ್ಲಿ ಮಾಡಲಾಯಿತು.

ಸ್ವತಃ ಉಡುಪಿಯ ಬಿಷಪ್ ಕೆಲ ಚರ್ಚ್ ಗಳಿಗೆ ಭೇಟಿ ಕೊಟ್ಟು ಕೊರೊನಾ ವಿರುದ್ಧ ಜನಜಾಗೃತಿ ಮೂಡಿಸಿದ್ದಾರೆ. ಮುಂದಿನ ಶುಕ್ರವಾರ ಒಂದು ದಿನ ನಿರಂತರವಾಗಿ ಕೊರೊನಾ ವೈರಸ್‍ನ ಬಗ್ಗೆ, ಮುಂಜಾಗ್ರತಾ ಕ್ರಮಗಳ ಬಗ್ಗೆ ಭಕ್ತರು ಕೈಗೊಳ್ಳಬೇಕಾದ ಮುನ್ನೆಚ್ಚರಿಕೆಯ ಬಗ್ಗೆ ಚರ್ಚ್ ಗಳಲ್ಲಿ ಕ್ರೈಸ್ತ ಸಂಸ್ಥೆಗಳಲ್ಲಿ ಕಾರ್ಯಾಗಾರವನ್ನು ನಡೆಸಲು ಧರ್ಮಪ್ರಾಂತ್ಯ ತೀರ್ಮಾನಿಸಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *