Connect with us

LATEST NEWS

ಉಡುಪಿಯಲ್ಲಿ ಬ್ಲಾಕ್ ಫಂಗಸ್ ಗೆ ಮತ್ತೊಂದು ಬಲಿ

ಉಡುಪಿ ಜೂನ್ 5: ಕೊರೊನಾ ಸೊಂಕಿನ ನಡುವೆ ಈಗ ಬ್ಲಾಕ್ ಫಂಗಸ್ ಮಾರಣಾಂತಿಕವಾಗಿ ಕಾಡತೊಡಗಿದ್ದು, ಉಡುಪಿ ಜಿಲ್ಲೆಯಲ್ಲಿ ಬ್ಲಾಕ್ ಫಂಗಸ್ ( ಕಪ್ಪು ಶಿಲೀಂದ್ರ) ಸೋಂಕಿಗೆ ಎರಡನೇ ಬಲಿಯಾಗಿದೆ. ವಾರದ ಹಿಂದೆ ಬ್ಲಾಕ್ ಫಂಗಸ್ ಸೋಂಕಿಗೆ ತುತ್ತಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದ ಉಡುಪಿ ಸಮೀಪದ ಕಡೆಕಾರಿನ 55 ವರ್ಷದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.


ಈ ಮೊದಲು ಉಡುಪಿಯ 76 ವರ್ಷದ ವ್ಯಕ್ತಿಯೊಬ್ಬರು ಇದೇ ಸೋಂಕಿಗೆ ಬಲಿಯಾಗಿದ್ದರು. ಸದ್ಯ ಮಣಿಪಾಲದಲ್ಲಿ ಇಬ್ಬರು ಮತ್ತು ಜಿಲ್ಲಾಸ್ಪತ್ರೆಯಲ್ಲಿ ಓರ್ವ ರೋಗಿ ಬ್ಲಾಕ್ ಫಂಗಸ್ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.