Connect with us

    LATEST NEWS

    ಅಕ್ಟೋಬರ್ 3 ರಂದು ಉಡುಪಿ ಜಿಲ್ಲಾ ಬಂದ್ ಗೆ ಕರೆ

    ಉಡುಪಿ ಸೆಪ್ಟೆಂಬರ್ 30: ಉಡುಪಿ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯ ಹೊಸ ನಿಯಮದಿಂದ ಉಂಟಾಗಿರುವ ಸಮಸ್ಯೆ ಹಿನ್ನಲೆ ಕೆಲವು ದಿನಗಳಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿರುವ ಉಡುಪಿ ಜಿಲ್ಲಾ ಕಟ್ಟಡ ಸಾಮಗ್ರಿ ಲಾರಿ ಟೆಂಪೋ ಮಾಲಕರ ಸಂಘಟನೆಗಳ ಒಕ್ಕೂಟವು ಅಕ್ಟೋಬರ್ 3ರಂದು ಉಡುಪಿ ಜಿಲ್ಲಾ ಬಂದ್‌ ನಡೆಸಲು ನಿರ್ಧರಿಸಿವೆ.


    ಈಗಾಗಲೇ ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ, ಜಿಲ್ಲಾ ಎಸ್‌ಪಿ ಡಾ. ಅರುಣ್‌ ಕೆ. ಅವರು ಜಿಲ್ಲೆಯ ಐವರು ಶಾಸಕರ ಸಮ್ಮುಖದಲ್ಲಿ ಲಾರಿ, ಟೆಂಪೋ ಮಾಲಕರ ಸಭೆ ನಡೆಸಿದ್ದರೂ ಫ‌ಲಪ್ರದವಾಗಿರಲಿಲ್ಲ. ಹೀಗಾಗಿ ಒಕ್ಕೂಟದ 12 ವಲಯದ ಅಧ್ಯಕ್ಷರು ಸೇರಿದಂತೆ ಪ್ರಮುಖರು ಶುಕ್ರವಾರ ಸಭೆ ನಡೆಸಿ, ಅಕ್ಟೋಬರ್ 3ರಂದು ಬಂದ್‌ಗೆ ಕರೆ ನೀಡಿದ್ದಾರೆ.

    ಬಂದ್‌ ಸಂಬಂಧ ಶನಿವಾರ ಜಿಲ್ಲಾಧಿಕಾರಿ ಹಾಗೂ ಎಸ್‌ಪಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸುವುದಾಗಿ ಒಕ್ಕೂಟದ ಪ್ರತಿನಿಧಿ ರಾಘವೇಂದ್ರ ಶೆಟ್ಟಿ ತಿಳಿಸಿದ್ದಾರೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *