Connect with us

LATEST NEWS

ಉಡುಪಿ : ಪಡುಬಿದ್ರೆ ಬೈಕಿಗೆ ಬಸ್ಸುಢಿಕ್ಕಿ- ಬೈಕ್ ಸವಾರ ಅಶ್ವಿತ್ ಶೆಟ್ಟಿ ಮೃತ್ಯು..!

ಬೈಕ್‍ ಗೆ ಬಸ್ಸು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಪಡುಬಿದ್ರೆ ನಂದಿಕೂರಿನಲ್ಲಿ ಬುಧವಾರ ಬೆಳಗ್ಗೆ ನಡೆದಿದೆ.

ಉಡುಪಿ : ಬೈಕ್‍ ಗೆ ಬಸ್ಸು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಪಡುಬಿದ್ರೆ ನಂದಿಕೂರಿನಲ್ಲಿ ಬುಧವಾರ ಬೆಳಗ್ಗೆ ನಡೆದಿದೆ.

ಮೃತ ಬೈಕ್ ಸವಾರನನ್ನು ಕಾರ್ಕಳದ ಅಜೆಕಾರು ನಿವಾಸಿ ಅಶ್ವಿತ್ ಶೆಟ್ಟಿ (32) ಎಂದು ಗುರುತಿಸಲಾಗಿದೆ.

ಕಾರ್ಕಳ-ಪಡುಬಿದ್ರಿ ರಾಜ್ಯ ಹೆದ್ದಾರಿಯ ನಂದಿಕೂರು-ಮುದರಂಗಡಿ ತಿರುವಿನಲ್ಲಿ ಈ ಅಪಘಾತ ನಡೆದಿದೆ.

ಬೈಕ್ ಸವಾರ ತೀವ್ರ ಗಾಯಗೊಂಡಿದ್ದು, ಕೂಡಲೇ ಆತನನ್ನು ಆಸ್ಪತ್ರೆಗೆ ಸೇರಿಸಲಾಯಿತು.

ಆದರೆ ಅದಾಗಲೇ ಆತ ಮೃತಪಟ್ಟಿದ್ದು, ಪ್ರಕರಣ ಪಡುಬಿದ್ರಿ ಠಾಣೆಯಲ್ಲಿ ದಾಖಲಾಗಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *