LATEST NEWS
ಲಾರಿ ಚಾಲಕನ ಬೇಜವ್ದಾರಿ ಚಾಲನೆ – ಕಾರುಗಳ ನಡುವೆ ಸರಣಿ ಅಪಘಾತ
ಉಡುಪಿ ಮಾರ್ಚ್ 3: ಲಾರಿ ಚಾಲಕನ ಅಜಾಗರೂಕತೆ ಚಾಲನೆಯಿಂದಾಗಿ ಕಾರುಗಳ ನಡುವೆ ಸರಣಿ ಅಪಘಾತ ನಡೆದ ಘಟನೆ ಕರಾವಳಿ ಬೈಪಾಸ್ ಬಳಿ ನಡೆದಿದೆ. ಈ ಘಟನೆಯಲ್ಲಿ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.
ಟೈಲ್ಸ್ ಸಾಗಿಸುತ್ತಿದ್ದ ಲಾರಿ ಯಾವುದೇ ಮುನ್ಸೂಚನೆ ನೀಡದೆ ಏಕಾಏಕಿ ನಿಧಾನಗೊಳಿಸಿದ್ದಾನೆ. ಈ ಸಂದರ್ಭ ಹಿಂದೆ ಬರುತ್ತಿದ್ದ ಕಾರು ಲಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಇದೇ ಸಂದರ್ಭ ಕುಂದಾಪುರ ಕಡೆಗೆ ಸಾಗುತ್ತಿದ್ದ ಇನ್ನೊಂದು ಕಾರು ಡಿಕ್ಕಿಯಾಗಿದೆ. ಉಡುಪಿ ಸಂಚಾರ ಪೊಲೀಸರು ಸ್ಥಳಕ್ಕೆ ಆಗಮಿಸಿ ವಾಹನಗಳನ್ನು ತೆರವುಗೊಳಿಸಿದ್ದಾರೆ.