LATEST NEWS
ಉಡುಪಿ – ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು
ಉಡುಪಿ ಡಿಸೆಂಬರ್ 05: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆಕಡಿಯಾಳಿ ಓಕುಡೆ ಟವರ್ಸ್ ಬಳಿ ಸಂಭವಿಸಿದೆ. ಘಟನೆಯಲ್ಲಿ ಹಲವು ವಾಹನಗಳು ಜಖಂಗೊಂಡಿದ್ದು ಓರ್ವ ವೃದ್ಧನಿಗೆ ಗಂಭೀರ ಗಾಯಗಳಾಗಿವೆ.
ಕೆಎ 19 ನೋಂದಣಿ ಸಂಖ್ಯೆಯ ಸ್ವಿಫ್ಟ್ ಕಾರು ಮಣಿಪಾಲದಿಂದ ಉಡುಪಿ ಕಡೆಗೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಕಡಿಯಾಳಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಸಡನ್ ಬ್ರೇಕ್ ಹಾಕಿದ್ದರಿಂದ ಕಾರು ಪಲ್ಟಿಯಾಗಿದೆ ಎನ್ನಲಾಗಿದೆ. ಈ ವೇಳೆ ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದು ರಸ್ತೆ ದಾಟಲು ಕಾಯುತ್ತಿದ್ದ ಹಿರಿಯ ನಾಗರಿಕರಿಗೆ ಡಿಕ್ಕಿ ಹೊಡೆದಿದೆ. ಅಪಘಾತ ಸಂಭವಿಸಿದಾಗ ಹಿರಿಯ ನಾಗರಿಕರು ತಮ್ಮ ದ್ವಿಚಕ್ರ ವಾಹನದಲ್ಲಿ ರಸ್ತೆ ದಾಟಲು ಹೊರಟಿದ್ದರು ಎಂದು ವರದಿಯಾಗಿದೆ.
ಕಾರಿನಲ್ಲಿ ಸಿಲುಕಿಕೊಂಡಿದ್ದ ಇಬ್ಬರನ್ನೂ ಸ್ಥಳೀಯರು ಹೊರತೆಗೆದು ರಕ್ಷಣೆ ಮಾಡಿದ್ದಾರೆ. ಸಂಚಾರಿ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿದ್ದಾರೆ. ಪಲ್ಟಿಯಾದ ಕಾರು ವೇಗವಾಗಿ ಬಂದಿದ್ದರಿಂದ ಪಲ್ಟಿಯಾಗಿ ರಸ್ತೆ ಬದಿ ನಿಲ್ಲಿಸಿದ್ದ ವಾಹನಗಳನ್ನು ತಳ್ಳಿಕೊಂಡು ಹೋಗಿದ್ದು ವಾಹನಗಳು ಜಖಂಗೊಂಡಿವೆ. ಉಡುಪಿ ಸಂಚಾರಿ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ.