ಭಾರಿ ವಿರೋಧವಿದ್ದರೂ ಮತ್ತೆ ಉಡುಪಿ ಚಿಕ್ಕಮಗಳೂರಿನಲ್ಲಿ ಗೆಲುವಿನ ನಗೆ ಬೀರಿದ ಸಂಸದೆ ಶೋಭಾ ಕರಂದ್ಲಾಜೆ

ಉಡುಪಿ ಮೇ 23: ಸ್ವಪಕ್ಷೀಯರಿಂದಲೇ ಭಾರಿ ವಿರೋಧ ಎದುರಿಸಬೇಕಾಗಿ ಬಂದ ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಭಾರಿ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ತಮ್ಮ ಪ್ರತಿಸ್ಪರ್ಧಿ ಮಾಜಿ ಸಚಿವ ಕಾಂಗ್ರೇಸ್ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ವಿರುದ್ದ ಭಾರಿ ಅಂತರದಲ್ಲಿ ಗೆಲುವನ್ನು ಸಾಧಿಸಿದ್ದಾರೆ.

ಉಡುಪಿ ಚಿಕ್ಕಮಗಳೂರು ಹಾಲಿ ಸಂಸದೆ ಶೋಭಾ ಕರಂದ್ಲಾಜೆ ಅವರನ್ನು ಅಭ್ಯರ್ಥಿಯಾಗಿ ಘೋಷಿಸುವುದಕ್ಕೆ ಸ್ಥಳೀಯ ಬಿಜೆಪಿ ಮುಖಂಡರೇ ಭಾರಿ ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿ ಗೋ ಬ್ಯಾಕ್ ಶೋಭಾ ಅಭಿಯಾನ ಕೂಡ ಆರಂಭಿಸಿದ್ದರು.
ಶೋಭಾ ಕರಂದ್ಲಾಜೆ ಅವರಿಗೆ ಎದುರಾಳಿಯಾಗಿ ಕಾಂಗ್ರೇಸ್ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಪ್ರಮೋದ್ ಮಧ್ವರಾಜ್ ಅವರನ್ನು ಕಣಕ್ಕಿಳಿಸಿದಿದ್ದರು.

ಮತ ಎಣಿಕೆಯ ಮೊದಲ ಸುತ್ತಿನಿಂದ ಭಾರಿ ಅಂತರ ಕಾಯ್ದುಕೊಂಡ ಶೋಭಾ ಕರಂದ್ಲಾಜೆ, ಭಾರಿ ಅಂತರದಲ್ಲಿ ಗೆಲವು ಸಾಧಿಸಿದ್ದಾರೆ.

10 Shares

Facebook Comments

comments