ಉಡುಪಿ-ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ನಾಮಪತ್ರ ಸಲ್ಲಿಕೆ

ಉಡುಪಿ ಮಾರ್ಚ್ 22: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಶೋಭಾ ಕರಂದ್ಲಾಜೆ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಜ್ಯೋತಿಷಿಗಳ ಸಲಹೆಯಂತೆ ಇಂದು ಶುಭ ದಿನವಾದ ಹಿನ್ನಲೆಯಲ್ಲಿ ಅವರು ನಾಮಪತ್ರ ಸಲ್ಲಿಸಿದ್ದಾರೆ.

ನಾಮಪತ್ರ ಸಲ್ಲಿಸಿದ ನಂತರ ಮಾತನಾಡಿದ ಅವರು ಇಂದು ಶುಭ ಶುಕ್ರವಾರವಾಗಿದ್ದು, ಮಹಾಕಾಳಿ ದುರ್ಗೆಯ ದಿನ ಅಂತ ಇಂದು ನಾಮಪತ್ರ ಸಲ್ಲಿಸಿದ್ದೇನೆ. ಆದರೆ ಸಾರ್ವಜನಿಕವಾಗಿ ಮಾರ್ಚ್ 26 ರಂದು ನಾಮಪತ್ರ ಸಲ್ಲಿಸಲಿದ್ದೇನೆ ಎಂದು ತಿಳಿಸಿದ ಅವರು ಅಂದು ಕೇಂದ್ರ ರಕ್ಷಾ ಸಚಿವೆ ನಿರ್ಮಲಾ ಸೀತಾರಾಮನ್ ಉಡುಪಿಗೆ ಆಗಮಿಸಲಿದ್ದು, ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯಲ್ಲಿ ಭಾಗವಹಿಸುತ್ತಾರೆ ಎಂದು ತಿಳಿಸಿದರು.

ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಕೃಷ್ಣಮಠಕ್ಕೆ ಭೇಟಿ ನೀಡಲಿದ್ದು, ನಂತರ ಪರ್ಯಾಯ ಶ್ರೀಗಳ ಜೊತೆ ಮಾತುಕತೆ ನಡೆಸಲಿದ್ದಾರೆ.

ಉಡುಪಿಯಲ್ಲಿ ಬೃಹತ್ ಸಮಾವೇಶ ನಡೆಸಿ ನಂತರ ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ 12 ಗಂಟೆಗೆ ನಾಮಪತ್ರ ಸಲ್ಲಿಸಲಾಗುವುದು ಎಂದು ತಿಳಿಸಿದರು.

Facebook Comments

comments