LATEST NEWS
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಶೋಭಾ ಕರಂದ್ಲಾಜೆ Vs ಪ್ರಮೋದ್ ಮಧ್ವರಾಜ್

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಶೋಭಾ ಕರಂದ್ಲಾಜೆ Vs ಪ್ರಮೋದ್ ಮಧ್ವರಾಜ್
ಉಡುಪಿ ಮಾರ್ಚ್ 21: ಬಹಳ ಕುತೂಹಲ ಮೂಡಿಸಿದ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಹಾಲಿ ಸಂಸದೆ ಶೋಭಾ ಕರಂದ್ಲಾಜೆ ವಿರುದ್ದ ಜೆಡಿಎಸ್ ನಿಂದ ಪ್ರಮೋದ್ ಮಧ್ವರಾಜ್ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ.
ಮೈತ್ರಿ ಸರ್ಕಾರದ ಧರ್ಮದಂತೆ ಜೆಡಿಎಸ್ ಪಕ್ಷಕ್ಕೆ ಲಭಿಸಿರುವ ಉಡುಪಿ ಚಿಕ್ಕಮಗಳೂರು ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದ ಪ್ರಮೋದ್ ಮಧ್ವರಾಜ್ ಅವರಿಗೆ ಜೆಡಿಎಸ್ ಫಾರಂ ನೀಡಲಾಗುವುದು ಎಂದು ಈಗಾಗಲೇ ಸಿಎಂ ಕುಮಾರಸ್ವಾಮಿ ಘೋಷಿಸಿದ್ದು, ಪ್ರಮೋದ್ ಮಧ್ವರಾಜ್ ಸ್ಪರ್ಧೆ ಖಚಿತವಾಗಿದೆ.

ಬಿಜೆಪಿ ಭದ್ರಕೋಟೆಯಾಗಿರುವ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಹಾಲಿ ಸಂಸದೆ ಶೋಭಾ ಕರಂದ್ಲಾಜೆ ವಿರುದ್ದ ಅಲೆ ಇದ್ದು, ಈ ಹಿನ್ನಲೆಯಲ್ಲಿ ಜೆಡಿಎಸ್ ಮಾಜಿ ಸಚಿವ ಕಾಂಗ್ರೇಸ್ ಮುಖಂಡ ಪ್ರಮೋದ್ ಮಧ್ವರಾಜ್ ಅವರಿಗೆ ಮಣೆಹಾಕಿದೆ.
[amazon_link asins=’B073JWXGNT’ template=’ProductLink’ store=’in-1′ marketplace=’IN’ link_id=’b091db0c-d0ad-4d75-a4ff-ae47d2cd14d3′]
ಸ್ಪರ್ಧೆ ಖಚಿತವಾದ ಹಿನ್ನೆಲೆಯಲ್ಲಿ ಇಂದು ಪ್ರಮೋದ್ ಮಧ್ವರಾಜ್ ಜೆಡಿಎಸ್ ವರಿಷ್ಠ ಎಚ್‍ಡಿ ದೇವೇಗೌಡರನ್ನ ಭೇಟಿಮಾಡಿ ಚರ್ಚೆ ನಡೆಸಿದ್ದರು. ಮೂಲಗಳ ಮಾಹಿತಿಯ ಅನ್ವಯ ಇಂದು ರಾತ್ರಿ ಪ್ರಮೋದ್ ಮಧ್ವರಾಜ್ ಅವರಿಗೆ ಜೆಡಿಎಸ್ ಬಿಫಾರಂ ನೀಡುವ ಸಾಧ್ಯತೆ ಇದ್ದು, ಮುಹೂರ್ತ ನೋಡಿ ದೇವೇಗೌಡರು ಸೂಚಿಸಿದ ಬಳಿಕ ಪ್ರಮೋದ್ ನಾಮಪತ್ರ ಸಲ್ಲಿಸಲಿದ್ದಾರೆ ಎನ್ನಲಾಗಿದೆ.
ಈ ಕುರಿತು ನಿನ್ನೆಯಷ್ಟೇ ಪ್ರತಿಕ್ರಿಯೆ ನೀಡಿದ್ದ ಮಧ್ವರಾಜ್ ಅವರು, ಉಭಯ ಪಕ್ಷಗಳು ಒಪ್ಪಿದರೆ ಜೆಡಿಎಸ್ ಚಿಹ್ನೆಯ ಅಡಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆಗೆ ಸಿದ್ಧ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸಹಜವಾಗಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧೆ ಮಾಡಲು ಬಯಸಿದ್ದೆ.ಆದರೆ ಉಡುಪಿ-ಚಿಕ್ಕಮಗಳೂರು ಕ್ಷೇತ್ರ ಜೆಡಿಎಸ್ ತೆಕ್ಕೆಗೆ ಬಂದಿದೆ. ಇದು ಮತ್ತೆ ಕೈ ಪಾಲಿಗೆ ಬರಬೇಕಿದ್ದರೆ ಹೈಕಮಾಂಡ್ ಮಟ್ಟದಲ್ಲಿ ತೀರ್ಮಾನ ಆಗಬೇಕು. ಒಂದು ವೇಳೆ ಮಾತುಕತೆ ಸಾಧ್ಯವಾಗದಿದ್ದರೆ, ಜೆಡಿಎಸ್ ಚಿಹ್ನೆಯ ಅಡಿ ಸ್ಪರ್ಧೆ ಮಾಡಲು ಸಿದ್ಧ ಎಂದು ಹೇಳಿದ್ದರು.