Connect with us

    LATEST NEWS

    ಹಿಜಬ್ ತೀರ್ಪು – ಕಾಲೇಜುಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

    ಉಡುಪಿ ಅಕ್ಟೋಬರ್ 13: ಹಿಜಬ್ ವಿವಾದ ಕುರಿತಂತೆ ಸುಪ್ರೀಂಕೋರ್ಟ್ ಇಂದು ತನ್ನ ತೀರ್ಪು ಪ್ರಕಟಿಸಿರುವ ಹಿನ್ನಲೆ ಉಡುಪಿ ಜಿಲ್ಲೆಯಾದ್ಯಂತ ಹಲವು ಕಾಲೇಜುಗಳಿಗೆ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ.


    ಹಿಜಾಬ್ ವಿವಾದಕ ವಿವಾದದ ಕೇಂದ್ರಬಿಂದು ಆಗಿರುವ ಉಡುಪಿ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು, ಉಡುಪಿ ಅಜ್ಜರಕಾಡು ಮಹಿಳಾ ಪದವಿ ಕಾಲೇಜು, ಉಡುಪಿ ಎಂಜಿಎಂ ಕಾಲೇಜು ಹಾಗೂ ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜು ಸೇರಿದಂತೆ ಹಲವು ಕಾಲೇಜುಗಳಿಗೆ ಪೊಲೀಸ್ ಭದ್ರತೆ ಒದಗಿಸಲಾಗಿದೆ.

    ಸ್ಥಳಕ್ಕೆ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಅಕ್ಷಯ್ ಮಚ್ಚೇಂದ್ರ ಹಾಕೆ ಭೇಟಿ ನೀಡಿ ಭದ್ರತೆ ಪರಿಶೀಲನೆ ನಡೆಸಿದರು. ಹಿಜಾಬ್ ವಿಚಾರದಲ್ಲಿ ವಿವಾದ ಉಂಟಾದ ಕೆಲವು ಸೂಕ್ಷ್ಮ ಪ್ರದೇಶಗಳ ಕಾಲೇಜುಗಳಿಗೆ ಬಿಗಿ ಬಂದೋಬಸ್ತ್ ಒದಗಿಸಲಾಗಿದೆ. ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ವಹಿಸಲಾಗಿದೆ ಎಂದು ಎಸ್ಪಿ ಅಕ್ಷಯ್ ಎಂ ಹಾಕೆ ತಿಳಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply