Connect with us

    LATEST NEWS

    ಉಡುಪಿ ವಿಡಿಯೋ ಪ್ರಕರಣ – ಕಾಲೇಜಿನ ವಿರುದ್ದ ಮಾತನಾಡಿದ್ದಕ್ಕೆ ವಿಧ್ಯಾರ್ಥಿನಿಗೆ ಅಶ್ಲೀಲ ಸಂದೇಶ….!!

    ಉಡುಪಿ ಜುಲೈ 31 : ಉಡುಪಿಯ ನೇತ್ರಜ್ಯೋತಿ ಕಾಲೇಜಿನಲ್ಲಿ ಶೌಚಾಲಯದಲ್ಲಿ ವಿಧ್ಯಾರ್ಥಿನಿಯ ವಿಡಿಯೋ ಪ್ರಕರಣಕ್ಕೆ ಸಂಬಂದಿಸಿದಂತೆ ಕಾಲೇಜಿನ ವಿರುದ್ದ ಮಾತನಾಡಿದ ವಿಧ್ಯಾರ್ಥಿನಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶಗಳು ಬರುತ್ತಿದ್ದು,. ಇದೀಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.


    ಉಡುಪಿಯ ಖಾಸಗಿ ಕಾಲೇಜಿನ (Udupi Private College) ಶೌಚಾಲಯದಲ್ಲಿ ವಿದ್ಯಾರ್ಥಿನಿಯ (Student) ವಿಡಿಯೋ ಚಿತ್ರೀಕರಣ (Video Record) ಮಾಡಲಾಗಿತ್ತು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ವಿದ್ಯಾರ್ಥಿನಿ ಪ್ರತಿಭಟನೆಯಲ್ಲಿ ಕಾಲೇಜಿನ ಅವ್ಯವಸ್ಥೆಗಳ ಹೇಳಿದ್ದಳು.

    ಈ ಹಿನ್ನೆಲೆ ಜುಲೈ 28 ರಂದು ಇನ್ಸ್ಟಾಗ್ರಾಮ್​ನಲ್ಲಿ ಜಿಗರ್ ಕೋಬ್ರಾ ಎಂಬ ಹೆಸರಿನ ಖಾತೆಯಿಂದ ಬೆದರಿಕೆ, ಕೆಟ್ಟ ಹಾಗೂ ಅಶ್ಲೀಲ ಸಂದೇಶ ಕಳುಹಿಸಿದ್ದಾರೆ. ಇದು ವಿದ್ಯಾರ್ಥಿನಿಯ ಮಾನಸಿಕ ನೆಮ್ಮದಿಗೆ ಭಂಗ ತಂದಿದೆ. ಈ ವಿಚಾರ ಹಿಂದೂ ಸಂಘಟನೆಗಳಿಗೆ ತಿಳಿದಿದೆ. ನಂತರ ಹಿಂದೂ ಸಂಘಟನೆಗಳು ಸಂದೇಶದ ಬಗ್ಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಎಸ್‌ಪಿ ಜೊತೆ ಸಮಾಲೋಚನೆ ಮಾಡಿದ ಬಳಿಕ ಕೆಟ್ಟ ಹಾಗೂ ಅಶ್ಲೀಲ ಸಂದೇಶ ಕಳುಹಿಸಿದವರ ಮೇಲೆ ಉಡುಪಿ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

     

    Share Information
    Advertisement
    Click to comment

    You must be logged in to post a comment Login

    Leave a Reply