UDUPI
ಉಡುಪಿಯಲ್ಲಿ 7 ಕೊರೊನಾ ಪ್ರಕರಣ ದೃಢ
ಉಡುಪಿ ಜೂನ್ 16: ಉಡುಪಿ ಜಿಲ್ಲೆಯಲ್ಲಿ ಇಂದು 7 ಮಂದಿಗೆ ಕೊರೊನಾ ಸೊಂಕು ದೃಢಪಟ್ಟಿದೆ. ಇದರೊಂದಿಗೆ ಉಡುಪಿ ಜಿಲ್ಲೆಯಲ್ಲಿ ಒಟ್ಟು ಸೊಂಕಿತರ ಸಂಖ್ಯೆ 1035ಕ್ಕೆ ಏರಿಕೆಯಾಗಿದೆ. ಇಂದು ಬಂದಿರುವ ಎಲ್ಲಾ ಪ್ರಕರಣಗಳು ಮಹಾರಾಷ್ಟ್ರದಿಂದ ಬಂದವರಾಗಿದ್ದಾರೆ.
ಇನ್ನು ಉಡುಪಿಯಲ್ಲಿ ಇಂದು 81 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಒಟ್ಟು ಕೊರೊನಾದಿಂದ ಗುಣಮುಖರಾದವರ ಸಂಖ್ಯೆ 817 ಆಗಿದ್ದು, ಸದ್ಯ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 217 ಇದೆ.