LATEST NEWS
ಉಡುಪಿ ಕೊರೊನಾ ಪ್ರಕರಣ ಏರಿಕೆ – ಮಣಿಪಾಲ ಎಂಐಟಿ ಕಂಟೈನ್‌ಮೆಂಟ್ ವಲಯ

ಉಡುಪಿ ಮಾರ್ಚ್ 17:ಉಡುಪಿ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಏರಿಕೆಯ ಹಂತದಲ್ಲಿದ್ದು, ಹೊರ ರಾಜ್ಯಗಳಿಂದ ಜಿಲ್ಲೆಗೆ ಆಗಮಿಸುತ್ತಿರುವ ವಿಧ್ಯಾರ್ಥಿಗಳಲ್ಲಿ ಕೊರೊನಾ ಸೊಂಕು ಕಾಣಿಸಿಕೊಳ್ಳುತ್ತಿರುವುದು ಆತಂಕ ಸೃಷ್ಟಿಸಿದೆ.
ಮಣಿಪಾಲ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಹಲವರಿಗೆ ಕೋವಿಡ್–19 ದೃಢಪಟ್ಟಿರುವ ಹಿನ್ನೆಲೆಯಲ್ಲಿ ಎಂಐಟಿ ಪರಿಸರವನ್ನು ಕಂಟೈನ್‌ಮೆಂಟ್ ವಲಯವನ್ನಾಗಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು. ಮಂಗಳವಾರ ಜಿಲ್ಲೆಯಲ್ಲಿ ಪತ್ತೆಯಾದ 33 ಪ್ರಕರಣಗಳಲ್ಲಿ 27 ಎಂಐಟಿ ಹಾಗೂ ಮಣಿಪಾಲದ ಮಾಹೆ ವಿವಿ ಕ್ಯಾಂಪಸ್‌ನಲ್ಲಿ ಕಾಣಿಸಿಕೊಂಡಿವೆ. ಬುಧವಾರ ದೃಢಪಟ್ಟ 46 ಪ್ರಕರಣಗಳಲ್ಲಿ ಅರ್ಧಕ್ಕಿಂತ ಹೆಚ್ಚು ಎಂಐಟಿಯಲ್ಲಿ ಪತ್ತೆಯಾಗಿರುವುದರಿಂದ ಕಂಟೈನ್‌ಮೆಂಟ್ ವಲಯ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಎಂಐಟಿಯಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಸೆಮಿಸ್ಟರ್ ಪರೀಕ್ಷೆ ನಡೆಯುತ್ತಿದ್ದು, ಸೋಂಕಿತ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಸಧ್ಯ ಸೋಂಕಿತರು ಹೋಂ ಐಸೊಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.