Connect with us

UDUPI

ಉಡುಪಿ ಜಿಲ್ಲೆಯಲ್ಲಿ ಇಂದು 134 ಮಂದಿಗೆ ಕೊರೊನಾ ಸೊಂಕು

ಉಡುಪಿ ಜುಲೈ 19: ಉಡುಪಿ ಜಿಲ್ಲೆಯಲ್ಲಿ ಇಂದು ಮತ್ತೆ 134 ಜನರಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದ್ದು, ಒಟ್ಟು ಕೊರೊನಾ ಸೊಂಕಿತರ ಸಂಖ್ಯೆ 2222ಕ್ಕೆ ಏರಿಕೆಯಾಗಿದೆ.

ಉಡುಪಿ ಜಿಲ್ಲೆಯಲ್ಲಿ ಒಟ್ಟು 1628 ಮಂದಿ ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಸದ್ಯ ಜಿಲ್ಲೆಯಲ್ಲಿ 584 ಸಕ್ರಿಯ ಪ್ರಕರಣಗಳಿದ್ದು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ 10 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.

ಕಾಪು ಪೊಲೀಸ್ ಠಾಣೆಯ ಮತ್ತೆ ನಾಲ್ಕು ಮಂದಿ ಪೊಲೀಸರಿಗೆ ಪಾಸಿಟಿವ್ ಬಂದಿದೆ. ಕಳೆದ ವಾರ ಎಎಸ್ ಐ ಹಾಗೂ ನಾಲ್ಕು ಮಂದಿ ಪೊಲೀಸ್ ಸಿಬ್ಬಂದಿಗೆ ಪಾಸಿಟಿವ್ ಕಂಡುಬಂದಿತ್ತು. ಪರಿಣಾಮ ಕಾಪು ಪೊಲೀಸ್ ಠಾಣೆಯನ್ನು ಸೀಲ್‌ಡೌನ್ ಮಾಡಿ ಪಕ್ಕದ ಸಭಾ ಭವನಕ್ಕೆ ಠಾಣೆಯನ್ನ ತಾತ್ಕಾಲಿಕವಾಗಿ ಸ್ಥಳಾಂತರ ಮಾಡಲಾಗಿತ್ತು. ಆದರೆ, ಎರಡು ದಿನಗಳ ಬಳಿಕ ಠಾಣೆಯಲ್ಲಿ ಚಟುವಟಿಕೆ ಶುರುವಾಗಿದ್ದೇ ಇದೀಗ ಮತ್ತೆ ನಾಲ್ಕು ಮಂದಿ ಪೊಲೀಸರಿಗೆ ಪಾಸಿಟಿವ್ ಕಂಡು ಬಂದಿದೆ.‌ ಪರಿಣಾಮ ಇದೀಗ ಕಾಪು ಪೊಲೀಸ್ ಠಾಣೆಯಲ್ಲಿ ಒಟ್ಟು 9 ಮಂದಿ ಪೊಲೀಸರು ಕೋವಿಡ್ 19ಗೆ ತುತ್ತಾದಂತಾಗಿದೆ. ಈ ಹಿನ್ನಲೆಯಲ್ಲಿ ಇದೀಗ ಇಡೀ ಪೊಲೀಸ್ ಠಾಣೆಯನ್ನು ಮತ್ತೊಮ್ಮೆ ಸೀಲ್ ಡೌನ್ ಮಾಡಲಾಗಿದೆ.

Facebook Comments

comments