LATEST NEWS
ಉಡುಪಿ ಜಿಲ್ಲೆ ಒಂದೇ ದಿನ 300ಕ್ಕೂ ಅಧಿಕ ಕೊರೊನಾ ಪ್ರಕರಣ
ಉಡುಪಿ ಅಗಸ್ಟ್ 8: ಉಡುಪಿ ಜಿಲ್ಲೆಯಲ್ಲಿ ಇಂದು ಒಂದೇ ದಿನ 300ಕ್ಕೂ ಅಧಿಕ ಕೊರೊನಾ ಪ್ರಕರಣ ದಾಖಲಾಗಿದೆ. ದಕ್ಷಿಣಕನ್ನಡ ಜಿಲ್ಲೆಯ ಬಳಿಕ ಉಡುಪಿ ಜಿಲ್ಲೆಯಲ್ಲೂ ಕೊರೊನಾ ಪ್ರಕರಣಗಳಲ್ಲಿ ಯಾವುದೇ ಇಳಿಕೆ ಕಂಡು ಬರುತ್ತಿಲ್ಲ. ಇಂದು ಜಿಲ್ಲೆಯಲ್ಲಿ ಬರೋಬ್ಬರಿ 314 ಮಂದಿಗೆ ಕೊರೊನಾ ಸೊಂಕು ಕಾಣಿಸಿಕೊಂಡಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೊಂಕಿತರ ಸಂಖ್ಯೆ 5919 ಕ್ಕೆ ಏರಿಕೆಯಾಗಿದೆ. ಉಡುಪಿಯಲ್ಲಿ ಇಂದು ಮತ್ತೆ 5 ಮಂದಿ ಕೊರೊನಾದಿಂದ ಪ್ರಾಣ ಕಳೆದುಕೊಂಡಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಒಟ್ಟು 3347 ಮಂದಿ ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಸದ್ಯ ಜಿಲ್ಲೆಯಲ್ಲಿ 2512 ಸಕ್ರಿಯ ಪ್ರಕರಣಗಳಿದ್ದು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಉಡುಪಿಯಲ್ಲಿ 5 ಮಂದಿ ಕೊರೊನೊದಿಂದಾಗಿ ಮೃತಪಟ್ಟಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಇದುವರೆಗೆ 60 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಇಂದು ದಾಖಲಾದ ಪ್ರಕರಣಗಳಲ್ಲಿ ಉಡುಪಿ – 192, ಕುಂದಾಪುರ – 87 , ಕಾರ್ಕಳ – 30, ಜಿಲ್ಲೆಯ ಹೊರಗಿನ – 5 ಪ್ರಕರಣಗಳಿವೆ.