LATEST NEWS
ಉಡುಪಿ ಜಿಲ್ಲೆ – ಸಾವಿರಕ್ಕೆ ಏರಿಕೆಯಾದ ಸಕ್ರಿಯ ಕೊರೊನಾ ಪ್ರಕರಣ

ಉಡುಪಿ ಜುಲೈ 31: ಉಡುಪಿಯಲ್ಲಿ ಕೊರೊನಾ ಸಕ್ರಿಯ ಪ್ರಕರಣ ಸಾವಿರಕ್ಕೆ ಏರಿಕೆಯಾಗಿರುವ ಹಿನ್ನಲೆ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅಸಮಧಾನ ವ್ಯಕ್ತಪಡಿಸಿದ್ದು, ಜವಬ್ದಾರಿ ಸ್ಥಾನದಲ್ಲಿರುವವರು ಮೊದಲು ಕೊರೊನಾ ಮಾರ್ಗಸೂಚಿಗಳನ್ನು ಅನುಸರಿಸಬೇಕೆಂದು ಆಗ್ರಹಿಸಿದ್ದಾರೆ.
ಈ ಕುರಿತಂತೆ ಮಾತನಾಡಿದ ಅವರು ಉಡುಪಿ ಜಿಲ್ಲೆಯಲ್ಲಿ ಎರಡನೆಯ ಅಲೆ ಇನ್ನೂ ಮುಕ್ತಾಯ ಆಗಿಲ್ಲ, ಜನರಲ್ಲಿ ಕೊರೋನ ಹೋಗಿದೆ ಎಂಬ ಭಾವನೆ ಬೇಡ, ಜವಾಬ್ದಾರಿ ಸ್ಥಾನದಲ್ಲಿರುವವರು ಮೊದಲು ಸರಕಾರದ ಸೂಚನೆ ಅನುಸರಿಸಬೇಕು, ಜನಪ್ರತಿನಿಧಿಗಳು, ಅಧಿಕಾರಿಗಳು ಕೊರೋನಾ ಮಾರ್ಗಸೂಚಿಯನ್ನು ಪಾಲಿಸಿ ಜನಕ್ಕೆ ಮಾದರಿಯಾಗಬೇಕು ಎಂದು ಅವರು ಹೇಳಿದರು.

ಉಡುಪಿ ಜಿಲ್ಲೆಯಾದ್ಯಂತ 1 ತಿಂಗಳಿನಿಂದ ಪ್ರತಿದಿನ 100 ಪಾಸಿಟಿವ್ ಕೇಸ್ ಬರುತ್ತಿದ್ದು, ಜಿಲ್ಲೆಯ ಪಾಸಿಟಿವಿಟಿ ರೇಟ್ 3 ಶೇಕಡಾ ಆಸುಪಾಸಿನಲ್ಲಿದೆ ಆದರೆ ಕಳೆದ ಎರಡು ಮೂರು ದಿನದಿಂದ ಶೇಕಡಾ 5 ಪಾಸಿಟಿವಿಟಿ ರೇಟ್ ಬರುತ್ತಿದೆ. ಕೇರಳ ಮತ್ತು ಮಹಾರಾಷ್ಟ್ರದ ಜೊತೆ ಉಡುಪಿ ಸಂಪರ್ಕದಲ್ಲಿರುವ ಜಿಲ್ಲೆಗೆ ಆಗಮಿಸುತ್ತಿದ್ದು ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಿದೆ. ಪಾಸಿಟಿವ್ ಸಂಖ್ಯೆ ಹೆಚ್ಚಾಗಿದ್ದರೂ ಕಾರ್ಯಕ್ರಮಗಳು ನಡೆಯುತ್ತಿದೆ
ಬೇರೆಬೇರೆ ಕಾರ್ಯಕ್ರಮ ಮಾಡುವವರೇ ಮೂರನೇ ಅಲೆಯ ಆಹ್ವಾನಕ್ಕೆ ಕಾರಣ ಆಗುತ್ತಾರೆ, ಕಾರ್ಯಕ್ರಮ ಮಾಡುವವರಿಂದ ಸಾಮಾನ್ಯ ಜನರ ಜೀವನಕ್ಕೆ ಕಷ್ಟವಾಗಲಿದೆ ಎಂದು ಅವರು ಎಚ್ಚರಿಸಿದರು. ಈಗಾಗಲೇ ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣದ ಸಂಖ್ಯೆ ಸಾವಿರಕ್ಕೆ ಏರಿಕೆಯಾಗಿದೆ ಎಂದು ಉಡುಪಿ ಡಿಸಿ ಜಿ. ಜಗದೀಶ್ ಅಸಮಾಧಾನ ವ್ಯಕ್ತಪಡಿಸಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಳ ಜೊತೆ ಮಾತನಾಡಿದ್ದೇನೆ, ಎಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾಸ್ಕ್ ಇಲ್ಲದವರಿಗೆ ದಂಡ ವಿಧಿಸಲಾಗುವುದು ಎಂದರು.