LATEST NEWS
ದಕ್ಷಿಣಕನ್ನಡ ಉಡುಪಿ ಜಿಲ್ಲೆಯಲ್ಲಿ ಎಪ್ರಿಲ್ 26 ರಂದು ಮತದಾನ
ಮಂಗಳೂರು ಮಾರ್ಚ್ 16: ಲೋಕಸಭೆ ಚುನಾವಣೆಗೆ ದಿನ ಘೋಷಣೆ ಯಾಗಿದ್ದು, ದೇಶದಲ್ಲಿ ಒಟ್ಟು 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು ಜೂನ್ 4 ರಂದು ಫಲಿತಾಂಶ ಹೊರಬೀಳಲಿದೆ. ಕರ್ನಾಟಕದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದ್ದ ಎಪ್ರಿಲ್ 26 ಮತ್ತು ಮೇ 7 ಕ್ಕೆ ನಡೆಯಲಿದೆ.
ಉಡುಪಿ ಚಿಕ್ಕಮಗಳೂರು ಹಾಗೂ ದಕ್ಷಿಣಕನ್ನಡಕ್ಕೆ ಎಪ್ರಿಲ್ 26 ರಂದು ಮತದಾನ ನಡೆಯಲಿದೆ. ಕರ್ನಾಕಟದಲ್ಲಿ ಎಪ್ರಿಲ್ 26ಕ್ಕೆ 14 ಕ್ಷೇತ್ರಗಳು ಮತದಾನ ನಡೆಯಲಿದೆ. ಉಡುಪಿ ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ , ತುಮಕೂರು, ಮಂಡ್ಯ, ಮೈಸೂರು ,ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಕೇಂದ್ರ, ಚಿಕ್ಕಬಳ್ಳಾಪುರ, ಕೋಲಾರ ದಲ್ಲಿ ನಡೆಯಲಿದೆ.
ಮೇ 7ಕ್ಕೆ ಎರಡನೇ ಹಂತದಲ್ಲಿ 14 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ ಮತದಾನ ನಡೆಯಲಿದೆ.