Connect with us

    LATEST NEWS

    ಉಡುಪಿ ಜಿಲ್ಲಾಧಿಕಾರಿಗೆ ಬಂಧನ ಭೀತಿ ?

    ಉಡುಪಿ ಜಿಲ್ಲಾಧಿಕಾರಿಗೆ ಬಂಧನ ಭೀತಿ ?

    ಉಡುಪಿ ಮಾರ್ಚ್ 10: ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಅವರ ಬಂಧನ ಭೀತಿ ಎದುರಾಗಿದೆ. ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಗೆ ನ್ಯಾಯಾಲಯದಿಂದ ಬಂಧನ ವಾರೆಂಟ್ ಜಾರಿಯಾಗಿರುವ ಹಿನ್ನಲೆಯ ಬಂಧನದ ಭೀತಿ ಎದುರಾಗಿದೆ.

    ಭೂ ಒತ್ತುವರಿ ಸಂಬಂಧಿತ ವಿಚಾರಣೆಯ ಬೆಂಗಳೂರಿನಲ್ಲಿರುವ ವಿಶೇಷ ನ್ಯಾಯಾಲದಲ್ಲಿ ನಡೆಯುತ್ತಿದ್ದು, ಉಡುಪಿ ಜಿಲ್ಲೆಯಲ್ಲಿ ನಡೆದ ಒತ್ತುವರಿ ಬಗ್ಗೆ ನ್ಯಾಯಾಲಯ ಜಿಲ್ಲಾಡಳಿತದಿಂದ ಮಾಹಿತಿ ನೀಡುವಂತೆ ಆದೇಶಿಸಿತ್ತು ಎನ್ನಲಾಗಿದೆ, ಆದರೆ ಜಿಲ್ಲಾಡಳಿತ ನ್ಯಾಯಾಲಯಕ್ಕೆ ಮಾಹಿತಿ ನೀಡದೇ ನಿರ್ಲಕ್ಷ್ಯ ವಹಿಸಿದ ಹಿನ್ನೆಲೆ ನ್ಯಾಯಾಲಯ ವಾರೆಂಟ್ ಜಾರಿ ಮಾಡಿದೆ.

    ಉಡುಪಿ ಜಿಲ್ಲೆಯ ಕೆರೆ, ಭೂಮಿ ಒತ್ತುವರಿ ಹಿನ್ನೆಲೆ ಜಿಲ್ಲಾಡಳಿತ ಕೈಗೊಂಡ ಕ್ರಮದ ಬಗ್ಗೆ ನ್ಯಾಯಲಯ ಮಾಹಿತಿ ಕೇಳಿತ್ತು, ಆದರೆ ನ್ಯಾಯಾಲಯಕ್ಕೆ ಉತ್ತರ ನೀಡದ ಹಿನ್ನೆಲೆ ಬಂಧನ ವಾರೆಂಟ್ ಜಾರಿಯಾಗಿದೆ. ಉಡುಪಿ ಜಿಲ್ಲಾ ಎಸ್ಪಿ ಕಚೇರಿ ತಲುಪಿದ ಇಂದು ವಾರೆಂಟ್ ಪ್ರತಿ ತಲುಪಿದ್ದು, ಯಾವ ರೀತಿಯಲ್ಲಿ ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ ಎನ್ನುವುದನ್ನು ಕಾದು ನೋಡಬೇಕಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply