Connect with us

LATEST NEWS

ಚುನಾವಣೆಗೆ ಸಂಬಂಧಿಸಿದ ಕರಪತ್ರ, ಜಾಹೀರಾತು ಮೂಲಕ ಚುನಾವಣೆ ಪ್ರಚಾರ ಪಡಿಸುವ ಮುನ್ನ ಪೂರ್ವಾನುಮತಿ ಕಡ್ಡಾಯ – ಉಡುಪಿ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ, ಮಾರ್ಚ್ 02 : ಚುನಾವಣಾ ಆಯೋಗ ಸೂಚಿಸಿರುವ ನಿಯಮಾನುಸಾರ ಚುನಾವಣೆಗೆ ಸಂಬಂಧಿಸಿದ ಯಾವುದೇ ರೀತಿಯ ಕರಪತ್ರ ಹಾಗೂ ಜಾಹೀರಾತು ಮೂಲಕ ಚುನಾವಣೆ ಪ್ರಚಾರ ಪಡಿಸುವ ಮುನ್ನ ಎಂ.ಸಿ.ಎಂ.ಸಿ ಪ್ರಾಧಿಕಾರದ ಪೂರ್ವಾನುಮತಿ ಪಡೆಯುವುದು ಕಡ್ಡಾಯ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಹೇಳಿದರು.


ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆ ಸಂದರ್ಭದಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ತಡೆಯುವುದಕ್ಕಾಗಿ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥರು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಸ್ಥಳೀಯ ಕೇಬಲ್ ಅಪರೇಟರ್ಸ್ ಮತ್ತು ನೆಟ್‌ವರ್ಕ್ ಸರ್ವೀಸ್ ಪ್ರೊವೈಡರ್ಸ್ ಗಳಿಗೆ ಸೂಕ್ತ ನಿರ್ದೇಶನ ನೀಡಲು ಏರ್ಪಡಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

2024 ರ ಸಾರ್ವತ್ರಿಕ ಲೋಕಸಭಾ ಚುನಾವಣೆಯು ಕೆಲವೇ ದಿನಗಳಲ್ಲಿ ಘೋಷಣೆಯಾಗಿ ನೀತಿ ಸಂಹಿತೆ ಜಾರಿಗೆ ಬರಲಿದೆ. ಚುನಾವಣಾ ಪ್ರಕ್ರಿಯೆಗೆ ಸಂಬಂಧಿಸಿದ ಚಟುವಟಿಕೆಗಳಲ್ಲಿ ಭಾಗಿದರರಾಗಿರುವ ಪ್ರತಿಯೊಬ್ಬರೂ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಅಗದ
ರೀತಿಯಲ್ಲಿ ಕಾರ್ಯ ನಿರ್ವಹಿಸಬೇಕು ಎಂದರು. ಪ್ರಿಂಟಿಂಗ್ ಪ್ರೆಸ್ ಮಾಲೀಕರು ಕರ ಪತ್ರವನ್ನು ಮುದ್ರಿಸುವ ಮುನ್ನ ಕರಪತ್ರದಲ್ಲಿರುವ ಅಂಶಗಳ ವಿವರಗಳನ್ನು ಒಳಗೊಂಡ ಕರಡು ಕರಪತ್ರವನ್ನು ಮುದ್ರಿಸುವ ಮೂರು ದಿನ ಪೂರ್ವದಲ್ಲಿಯೇ ಎಂ.ಸಿ.ಎಂ.ಸಿ ಗೆ ಸಲ್ಲಿಸಿ, ಅನುಮತಿ ಪಡೆಯಬೇಕು. ಮುದ್ರಣದ ಕರಪತ್ರದಲ್ಲಿ ಮುದ್ರಕರ ಹೆಸರು, ಮುದ್ರಣದ ಸಂಖ್ಯೆಗಳನ್ನು ತಪ್ಪದೇ ನಮೂದಿಸಬೇಕು. ಮುದ್ರಣಕ್ಕೆ ತಗುಲುವ ವೆಚ್ಚವನ್ನು ಸಹ ನೀಡಬೇಕು ಎಂದರು. ಕರಪತ್ರದಲ್ಲಿರುವ ವಿಷಯಗಳು ದ್ವೇಷಪೂರಿತವಾಗಿರದೇ, ಇನ್ನೊಬ್ಬರನ್ನು ನಿಂದಿಸುವ ಮತ್ತು ಮಾನಹಾನಿ ಆಗುವುದು ಸೇರಿದಂತೆ ಮತ್ತಿತರ ನಿರ್ಬಂಧಿತ ವಿಷಯಗಳನ್ನು ಮುದ್ರಿಸಿ ಪ್ರಕಟಿಸಬಾರದು. ಇಂತಹ ಅಂಶಗಳು ಇದ್ದಲ್ಲಿ ಕರಪತ್ರದಲ್ಲಿ ಮುದ್ರಿಸಲು ಪೂರ್ವಾನುಮತಿ ನೀಡುವುದಿಲ್ಲ ಎಂದರು. ವಿದ್ಯುನ್ಮಾನ ಮಾಧ್ಯಮಗಳಲ್ಲಿ ಜಾಹೀರಾತುಗಳನ್ನು ಪ್ರಕಟಿಸುವ ಮುನ್ನ ಜಾಹೀರಾತು ವಿವರಗಳನ್ನು ಎಂಸಿಎಂಸಿ ಸಮಿತಿಯ ಮುಂದೆ ನಿಗಧಿತ ನಮೂನೆಗಳಲ್ಲಿ ನೀಡಿ, ಪೂರ್ವಾನುಮತಿ ಪಡೆದು ಪ್ರಚಾರಪಡಿಸಬೇಕು. ಸಮಾಜದಲ್ಲಿ ಶಾಂತಿ ಕದಡುವುದು, ಇನ್ನೊಬ್ಬರನ್ನು ಅಪಮಾನಿಸುವುದು, ಯಾವುದೇ ಧರ್ಮವನ್ನು ಹೀಯಾಳಿಸುವುದು ಸೇರಿದಂತೆ ಮತ್ತಿತರ ಉಲ್ಲಂಘಿಸದಂತಿರಬೇಕು ಎಂದರು.

ಮಾದರಿ ನೀತಿ ಸಂಹಿತೆ ಉಲ್ಲಂಘಿಸಿ ಕರಪತ್ರಗಳನ್ನು ಮುದ್ರಿಸುವುದು, ಜಾಹೀರಾತುಗಳನ್ನು ಪ್ರಚಾರ ಪಡಿಸುವುದು ಮಾಡಿದ್ದಲ್ಲಿ ಅಂತಹವರ ಮೇಲೆ ಆರ್.ಪಿ ಕಾಯ್ದೆಯಡಿಯಲ್ಲಿ ನಿರ್ದಾಕ್ಷಿಣ್ಯವಾಗಿ ಕಾನೂನಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
ಜಿಲ್ಲೆಯಲ್ಲಿ ನ್ಯಾಯಸಮ್ಮತ, ಶಾಂತಿಯುತ ಲೋಕಸಭಾ ಚುನಾವಣೆ ನಡೆಸಲು ಪ್ರತಿಯೊಬ್ಬರೂ ಸಹಕರಿಸಬೇಕು. ಚುನಾವಣಾ ಆಯೋಗ ನೀಡುವ ನಿರ್ದೇಶನಗಳು ಹಾಗೂ ನಿಯಮಗಳನ್ನು ಪಾಲಿಸಬೇಕು ಎಂದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *