LATEST NEWS
ಉಡುಪಿ ಜಿಲ್ಲಾಧಿಕಾರಿಯವರಿಗೆ ನಕಲಿ ಫೇಸ್ ಬಕ್ ಖಾತೆ ಸಂಕಟ…!!

ಉಡುಪಿ : ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರ ಹೆಸರಿನಲ್ಲಿ ಸೈಬರ್ ಕಳ್ಳರು ಮೂರನೇ ಬಾರಿ ನಕಲಿ ಫೇಸ್ ಬುಕ್ ಖಾತೆ ಸೃಷ್ಠಿ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿರುವ ಘಟನೆ ನಡೆದಿದೆ.
ಮೇ 31ರಂದು ಡಿಸಿ ಉಡುಪಿ ಎಂಬ ನಕಲಿ ಫೇಸ್‌ಬುಕ್ ಖಾತೆ ಸೃಷ್ಟಿಸಿ, ಡಿಸಿ ಫೋಟೋವನ್ನು ಪ್ರೋಫೈಲ್‌ಗೆ ಹಾಕಿ ದುರ್ಬಳಕೆ ಮಾಡಿಕೊಂಡಿದ್ದಾರೆ. ಅಲ್ಲದೆ ಮಸೆಂಜರ್ ಮೂಲಕ ಹಣ ಕೇಳಿ ಸಾರ್ವಜನಿಕರಿಗೆ ಸಂದೇಶ ಕಳುಹಿಸಿದ್ದಾರೆ. ಈ ಹಿನ್ನಲೆ ನಕಲಿ ಫೇಸ್‌ಬುಕ್ ಖಾತೆ ಸೃಷ್ಟಿಸಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಮೊದಲು ಎರಡು ಬಾರಿ ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಅವರ ಹೆಸರಿನಲ್ಲಿ ನಕಲಿ ಖಾತೆ ಸೃಷ್ಠಿಸಲಾಗಿತ್ತು.
