Connect with us

LATEST NEWS

ಬ್ರಿಟನ್ ನಿಂದ ಆಗಮಿಸಿದ್ದ 36 ಮಂದಿಯ ಕೊರೊನಾ ವರದಿ ನೆಗೆಟಿವ್

ಉಡುಪಿ ಡಿಸೆಂಬರ್ 30: ಕರ್ನಾಟಕದಲ್ಲಿ ಬ್ರಿಟನ್ ನಲ್ಲಿ ಕಂಡು ಬಂದ ಕೊರೊನಾದ ರೂಪಾಂತರ ವೈರಸ್ ದೃಡಪಟ್ಟ ಹಿನ್ನೆಲೆ ಉಡುಪಿ ಜಿಲ್ಲೆಗೆ ಲಂಡನ್ ನಿಂದ ಆಗಮಿಸಿದ್ದ ಎಲ್ಲಾ ಪ್ರಯಾಣಿಕರ ಪರೀಕ್ಷೆ ನಡೆಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.


ಲಂಡನ್‌ನಿಂದ ವಾಪಸಾದ ಎಲ್ಲಾ 36 ಮಂದಿಯ ಕೊರೊನಾ ಪರೀಕ್ಷೆಗೆ ಒಳಪಡಿಸಿದ್ದು, ಎಲ್ಲರ ಕೋವಿಡ್ ರಿಪೋರ್ಟ್ ನೆಗೆಟಿವ್ ಬಂದಿದೆ ಎಂದು ತಿಳಿಸಿದ ಅವರು, ಮುನ್ನೆಚ್ಚರಿಕಾ ಕ್ರಮವಾಗಿ ಎಲ್ಲಾ ಪ್ರಯಾಣಿಕರನ್ನು 14 ದಿನಗಳ ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ.

ಆರೋಗ್ಯ ಇಲಾಖೆ ಅಧಿಕಾರಿಗಳು, ನಿರಂತರ ಸಂಪರ್ಕದಲ್ಲಿ ಇದ್ದಾರೆ, ಕಾಯಿಲೆ ಲಕ್ಷಣಗಳು ಕಂಡು ಬಂದರೆ ಮತ್ತೊಮ್ಮೆ ಪರೀಕ್ಷೆ ನಡೆಸುತ್ತೇವೆ. ಸದ್ಯಕ್ಕೆ ಜಿಲ್ಲೆಯಲ್ಲಿ ಬ್ರಿಟನ್ ವೈರಸ್ ಆತಂಕ ಇಲ್ಲ ಎಂದು ತಿಳಿಸಿದ ಅವರು ಮಾಸ್ಕ್ , ಸಾಮಾಜಿಕ ಅಂತರ ಕಡ್ಡಾಯ, ಮಾಸ್ಕ್ ಹಾಕದೇ ಇರುವವರಿಗೆ ದಂಡ ಹಾಕಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್ ಹೇಳಿದ್ದಾರೆ.