LATEST NEWS
ಜಿಲ್ಲೆಯಲ್ಲಿ ತಾಯಿ ಮತ್ತು ಶಿಶು ಮರಣ ಪ್ರಕರಣಗಳಾಗದಂತೆ ಎಚ್ಚರವಹಿಸಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ
ಉಡುಪಿ, ಜನವರಿ 17 : ಪ್ರಸವ ಪೂರ್ವ ಹಾಗೂ ಪ್ರಸವ ನಂತರದಲ್ಲಿ ತೆಗೆದುಕೊಳ್ಳಬೇಕಾದ ಆರೈಕೆ ಕ್ರಮಗಳ ಅರಿವು ಮೂಡಿಸುವುದು ಹಾಗೂ ಆರೋಗ್ಯ ಸೇವೆಗಳನ್ನು ನೀಡುವುದರೊಂದಿಗೆ ಜಿಲ್ಲೆಯಲ್ಲಿ ತಾಯಿ ಮತ್ತು ಶಿಶು ಮರಣಕ್ಕೆ ಸಂಬಂಧಿಸಿದ ಯಾವುದೇ ಪ್ರಕರಣಗಳು ಆಗದಂತೆ ಎಚ್ಚರವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು.
ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ಆರೋಗ್ಯ ಇಲಾಖೆಯ ಸಾಮಾಜಿಕ ಸವಲತ್ತುಗಳ ಸಮನ್ವಯ ಸಮಿತಿ ಸಭೆ, ಟಿ.ಬಿ. ಫೋರಂ ಸಮಿತಿ ಸಭೆ, ಜಿಲ್ಲಾ ಮಟ್ಟದ ಲಸಿಕಾ ಕಾರ್ಯಪಡೆ ಸಲಹಾ ಸಮಿತಿ ಸಭೆ, ಜಿಲ್ಲಾ ಕಣ್ಗಾವಲು ಸಮಿತಿ ಸಭೆ, ಜಿಲ್ಲಾ ಖಾಸಗಿ ವೈದ್ಯಕೀಯ ಸಂಸ್ಥೆಗಳ ನೋಂದಣಾ ಪ್ರಾಧಿಕಾರದ ಆಸ್ಪತ್ರೆಗಳ ನೋಂದಣಿ ಮತ್ತು ಕುಂದುಕೊರತೆ ನಿವಾರಣಾ ಸಭೆ, ವಾಲೆಂಟರ್ ಬ್ಲಡದ ಟಾಸ್ಕ್ ಫೋಸ್ ಮೀಟಿಂಗ್ ಹಾಗೂ ವಿವಿಧ ಸಮಿತಿ ಸಭೆಗಳ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಗರ್ಭಿಣಿ ಮಹಿಳೆಯರಿಗೆ ಆರಂಭದಲ್ಲಿಯೇ ತಾಯಿಕಾರ್ಡನ್ನು ವಿತರಿಸಿ, ನಿಯಮಿತ ಆರೋಗ್ಯ ತಪಾಸಣೆಗೆ ಬಂದಾಗ ಅವರಲ್ಲಿರುವ ತೊಡಕುಗಳನ್ನು ಪರಿಣಾಮಕಾರಿಯಾಗಿ ಪ್ರಾರಂಭದಲ್ಲಿಯೇ ಗುರುತಿಸಿ, ಸರಿಯಾದ ಚಿಕಿತ್ಸೆಯನ್ನು ನೀಡಬೇಕು. ಹೆರಿಗೆ ಸಮಯದಲ್ಲಿ
ತೊಡಕು ಉಂಟಾದಲ್ಲಿ ಉನ್ನತ ಮಟ್ಟದ ಚಿಕಿತ್ಸೆಗಾಗಿ ಶಿಫಾರಸ್ಸು ಮಾಡಿದಾಗ ತುರ್ತು ಸಿಬ್ಬಂದಿಯೊAದಿಗೆ ಮೇಲ್ಮಟ್ಟದ ಆಸ್ಪತ್ರೆಗೆ ವರ್ಗಾಯಿಸಬೇಕು. ವರ್ಗಾಯಿಸುವ ಸಂಬAಧ ದೂರವಾಣಿಯ ಮೂಲಕ ಮೇಲ್ಮಟ್ಟದ ಆಸ್ಪತ್ರೆಗೆ ಮುಂಚಿತವಾಗಿ ತಿಳಿಸಿ, ಚಿಕಿತ್ಸೆ
ಒದಗಿಸಲು ಮುಂದಾಗಬೇಕು ಎಂದರು. ಜಿಲ್ಲೆಯಲ್ಲಿ 2023 ರ ಜುಲೈಯಿಂದ ಡಿಸೆಂಬರ್ ಅಂತ್ಯದವರೆಗೆ 2 ತಾಯಿ ಮರಣ ಹಾಗೂ 51 ಶಿಶು ಮರಣ ಪ್ರಕರಣಗಳು ಉಂಟಾಗಿವೆ. ಮುಂದಿನ ದಿನಗಳಲ್ಲಿ ಇಂತಹ ಪ್ರಕರಣಗಳು ಆಗದಂತೆ ನೋಡಿಕೊಳ್ಳಬೇಕು. 2023 ರ ಏಪ್ರಿಲ್ ನಿಂದ ಡಿಸೆಂಬರ್ ಅಂತ್ಯದವರೆಗೆ 9169 ಹೆರಿಗೆಗಳಾಗಿದ್ದು, ಖಾಸಗಿಯಲ್ಲಿ 6422, ಸರ್ಕಾರಿ ಆಸ್ಪತ್ರೆಗಳಲ್ಲಿ 2747 ಗಳಾಗಿದೆ, 3902 ಸಾಮಾನ್ಯ ಹೆರಿಗೆ ಉಂಟಾದರೆ, 5267 ಶಸ್ತç ಚಿಕಿತ್ಸೆ ಮೂಲಕ ಹೆರಿಗೆ ಮಾಡಿಸಲಾಗಿದೆ. ವೈದ್ಯರು ಸಾಮಾನ್ಯ ಹೆರಿಗೆ ಮಾಡಿಸಲು ಹೆಚ್ಚು ಒತ್ತು ನೀಡಬೇಕು ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದರು.