Connect with us

LATEST NEWS

ಕೋವಿಡ್ ರೂಪಾಂತರಿ ವೈರಸ್ ಓಮಿಕ್ರಾನ್ ನಿಯಂತ್ರಣಕ್ಕೆ ಸನ್ನದ್ಧರಾಗಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ಡಿಸೆಂಬರ್ 3 : ಕೋವಿಡ್ ಸೋಂಕಿನ ರೂಪಾಂತರ ವೈರಸ್ ಆದ ಓಮಿಕ್ರಾನ್ ಹರಡುವ ಸಾಧ್ಯತೆಯಿರುವ ಹಿನ್ನಲೆಯಲ್ಲಿ, ಜಿಲ್ಲೆಯಲ್ಲಿ ಈ ಹಿಂದೆ ಕೋವಿಡ್ ಅಲೆಗಳನ್ನು ನಿಯಂತ್ರಿಸಲು ರಚಿಸಿರುವ ಸಮಿತಿಗಳನ್ನು ಪುನಾರಾರಂಭಿಸಿ, ಕ್ರಿಯಾಶೀಲವಾಗಿ ಕಾರ್ಯ ನಿರ್ವಹಿಸಲು ಸನ್ನದ್ಧರಾಗಿರುವಂತೆ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ ತಿಳಿಸಿದ್ದಾರೆ.

 

ಅವರು ಬುಧವಾರ ಸಂಜೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ, ಜಿಲ್ಲೆಯಲ್ಲಿ ಓಮಿಕ್ರಾನ್ ವೈರಸ್ ನಿಯಂತ್ರಣ ಕುರಿತು ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ನಡೆದ ವರ್ಚುವಲ್ ಮೀಟಿಂಗ್ ನಲ್ಲಿ ಮಾತನಾಡಿದರು.
ಈಗಾಗಲೇ ವಿಶ್ವದ 11 ದೇಶಗಳಲ್ಲಿ ಹೊಸ ರೂಪಾಂತರಿ ತಳಿಯಾದ ಓಮಿಕ್ರಾನ್ ವ್ಯಾಪಕವಾಗಿ ಹರಡಿದ್ದು, ವಿದೇಶಿ ಪ್ರಯಾಣಿಕರಿಂದ ರಾಜ್ಯದಲ್ಲಿ ಸಹ ಹರಡುವ ಸಾಧ್ಯತೆಗಳಿದ್ದು, ಹೊಸ ತಳಿಯು ಹರಡುವ ವೇಗವು ಹೆಚ್ಚಿರುವ ಹಿನ್ನಲೆ, ಜಿಲ್ಲೆಯಲ್ಲಿ ಕಟ್ಟೆಚ್ಚರ ವಹಿಸುವುದು ಅವಶ್ಯವಾಗಿದೆ ಎಂದರು.

ಓಮಿಕ್ರಾನ್ ದೃಡಪಟ್ಟ ರಾಷ್ಟçಗಳಿಂದ ಜಿಲ್ಲೆಗೆ ಆಗಮಿಸುವ ಪ್ರಯಾಣಿಕರನ್ನು ತಪ್ಪದೇ ಪರೀಕ್ಷೆಗೆ ಒಳಪಡಿಸಬೇಕು. ಒಂದೊಮ್ಮೆ ಅವರ ಪರೀಕ್ಷಾ ವರದಿಯು ನೆಗೆಟಿವ್ ಬಂದಲ್ಲಿ ಅವರನ್ನು 7 ದಿನಗಳ ಹೋಂ ಕ್ವಾರಂಟೈನ್ ಮಾಡಬೇಕು. ಪಾಸಿಟಿವ್ ಬಂದಲ್ಲಿ ಅವರುಗಳನ್ನು 14 ದಿನಗಳ ಕಾಲ ಸಾಂಸ್ಥಿಕ ಐಸೋಲೇಶನ್/ಆಸ್ಪತ್ರೆಗೆ ದಾಖಲಿಸಬೇಕು ಎಂದ ಅವರು, ಕಳೆದ 15 ದಿನಗಳಿಂದ ಜಿಲ್ಲೆಗೆ ವಿದೇಶದಿಂದ ಬಂದಿರುವವರ ಮಾಹಿತಿಗಳನ್ನು, ಮಂಗಳೂರು ಹಾಗೂ ಬೆಂಗಳೂರು ವಿಮಾನ ನಿಲ್ಧಾಣಗಳಿಂದ ಪಡೆದು, ಅವರುಗಳನ್ನು ಪರೀಕ್ಷೆಗೆ ಒಳಪಡಿಸಬೇಕು ಎಂದರು.

ಜನ ಸಾಮಾನ್ಯರು ಮಾಸ್ಕ್ ಧರಿಸುವಿಕೆ, ಸಾಮಾಜಿಕ ಅಂತರ ಕಾಪಾಡುವುದು, ಕೈ ತೊಳೆಯುವುದು ಸೇರಿದಂತೆ ಕೋವಿಡ್ ನ ಸರಳ ಮಾರ್ಗಸೂಚಿಗಳನ್ನು ತಪ್ಪದೇ ಪಾಲನೆ ಮಾಡಬೇಕು. ತಮ್ಮ ನೆರೆ ಹೊರೆಯವರು ವಿದೇಶದಿಂದ ಬಂದಿದ್ದಲ್ಲಿ ಅವರ ಮಾಹಿತಿಗಳನ್ನು ಜಿಲ್ಲಾಡಳಿತಕ್ಕೆ ತಿಳಿಸಬೇಕು ಎಂದರು.

ಮುಂದಿನ ದಿನಗಳಲ್ಲಿ ಸೋಂಕು ಹೆಚ್ಚಾದಲ್ಲಿ ಅವುಗಳ ನಿರ್ವಹಣೆಗೆ ಅಗತ್ಯವಿರುವ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಅಧಿಕಾರಿಗಳು ಕೈಗೊಳ್ಳಬೇಕು. ಕೋವಿಡ್ ಕೇರ್ ಸೆಂಟರ್ ಗಳನ್ನು ತೆರೆಯಲು ಸ್ಥಳಗಳನ್ನು ಗುರುತಿಸಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಚಿಕಿತ್ಸೆಗೆ ಬೆಡ್ಗಳ ಕೊರತೆಯಾಗದಂತೆ ಮಾಹಿತಿಗಳನ್ನು ಹಾಗೂ ಬೆಡ್ ಲಭ್ಯತೆಗಳ ಬಗ್ಗೆ ಈಗಲೇ ಖಾಸಗಿ ಆಸ್ಪತ್ರೆಗಳಿಗೆ ಭೇಟಿ ನೀಡಿ, ಪರಿಶೀಲಿಸಿ ಆಕ್ಸಿಜನ್ ಸಹಿತಿ / ರಹಿತ, ಐಸಿಯು ಬೆಡ್ಗಳು ಹಾಗೂ ಅವುಗಳ ನರ‍್ವಹಣಾ ಮಾಹಿತಿಯನ್ನು ಸಂಬಂದಿಸಿದ ಸಮಿತಿಯವರು ಸಂಗ್ರಹಿಸಿಟ್ಟುಕೊಳ್ಳಬೇಕು ಎಂದರು.

ಕೋವಿಡ್ ಪರೀಕ್ಷಾ ನಿರ್ವಹಣಾ ಸಮಿತಿಯು ಪ್ರತಿದಿನ ಕೋವಿಡ್ ಪರೀಕ್ಷೆಯ ಸ್ವಾಬ್ ಸಂಗ್ರಹವನ್ನು ಅದೇ ದಿನ ಮಧ್ಯಾಹ್ನ ಹಾಗೂ ಸಂಜೆ 2 ಪಾಳಿಯಲ್ಲಿ ಟೆಸ್ಟಿಂಗ್ ಸೆಂಟರ್ ಗೆ ರವಾನಿಸಿ, ಅಂದಿನ ದಿನದ ಪರೀಕ್ಷೆಯ ವರದಿಯುನ್ನು ಅಂದೇ ನೀಡುವಂತೆ ಕಾರ್ಯ ಪ್ರವೃತ್ತರಾಗಬೇಕು ಎಂದರು.

3 ಮತ್ತು 4 ಕ್ಕಿಂತ ಹೆಚ್ಚು ಕೋವಿಡ್ ಪ್ರಕರಣಗಳು ಕಂಡು ಬಂದಲ್ಲಿ ಕೂಡಲೇ ಆ ಪ್ರದೇಶವನ್ನು ಮೈಕ್ರೋ ಕಂಟೈನ್ಮೆಂಟ್ ವಲಯ ಎಂದು ಘೋಷಿಸಬೇಕು. ಒಂದೇ ಪ್ರಕರಣ ಕಂಡುಬಂದಲ್ಲಿ ಆ ಮನೆಯನು ಸೀಲ್ಡೌನ್ ಮಾಡಬೇಕು ಎಂದು ಸೂಚನೆ ನೀಡಿದರು.
ಜಿಲ್ಲೆಯ ಎಲ್ಲಾ ಚೆಕ್ ಪೋಸ್ಟ್ ಗಳಲ್ಲಿ ಪೊಲೀಸರೊಂದಿಗೆ ಇತರೆ ಇಲಾಖೆಯ ಅಧಿಕಾರಿಗಳನ್ನು ನಿಯೋಜಿಸುವುದರೊಂದಿಗೆ ನಿರಂತರ ಪರಿಶೀಲನೆ ಕೈಗೊಳ್ಳಬೇಕು ಎಂದ ಅವರು, ಅಂಗಡಿ ಮುಂಗಟ್ಟುಗಳನ್ನು ನಡೆಸುವ ಎಲ್ಲಾ ಮಾಲೀಕರು ಮತ್ತು ಸಿಬ್ಬಂದಿಗಳು ಕೋವಿಡ್ ಮರ‍್ಗಸೂಚಿಗಳನ್ನು ತಪ್ಪದೇ ಪಾಲನೆ ಮಾಡುವಂತೆ ಸ್ಥಳೀಯ ಸಂಸ್ಥೆಗಳು ಎಚ್ಚರವಹಿಸಬೇಕು. ಉಲ್ಲಂಘಿಸಿದಲ್ಲಿ ತಪ್ಪದೇ ದಂಡ ವಿಧಿಸಬೇಕು ಎಂದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *