Connect with us

LATEST NEWS

ಉಡುಪಿ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಯಿಂದ ಚೆಕ್ ಪೋಸ್ಟ್ ಗಳ ದಿಢೀರ್ ಭೇಟಿ ಪರಿಶೀಲನೆ

ಉಡುಪಿ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಯಿಂದ ಚೆಕ್ ಪೋಸ್ಟ್ ಗಳ ದಿಢೀರ್ ಭೇಟಿ ಪರಿಶೀಲನೆ

ಉಡುಪಿ ಮಾರ್ಚ್ 12: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಉಡುಪಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ , ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ನಿಶಾ ಜೇಮ್ಸ್ ಜಿಲ್ಲೆಯ ಚೆಕ್ ಪೋಸ್ಟ್ ಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಚುನಾವಣಾ ಸಿದ್ದತೆ ಭರದಿಂದ ಸಾಗಿದ್ದು, ಮತದಾನದ ಜಾಗೃತಿ ಕಾರ್ಯಕ್ರಮಗಳು ನಡೆಯುತ್ತಿದೆ. ಈ ನಡುವೆ ಜಿಲ್ಲೆಯಲ್ಲಿ ನಿರ್ಮಿಸಲಾಗಿರುವ ಚೆಕ್ ಪೋಸ್ಟ ಗಳ ಪರಿಶೀಲನೆಗೆ ಇಬ್ಬರು ಮಹಿಳಾ ಅಧಿಕಾರಿಗಳು ರಾತ್ರಿ ಸಮಯದಲ್ಲಿ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

10-03-2019 ರ ರಾತ್ರಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ, ಸಹಾಯಕ ಪೊಲೀಸ್ ಅಧೀಕ್ಷಕರು, ಕಾರ್ಕಳ ಉಪವಿಭಾಗ ರವರೊಂದಿಗೆ ಶೀರೂರು ಜಿಲ್ಲಾ ಗಡಿಯಲ್ಲಿನ ಚೆಕ್ ಪೋಸ್ಟ್‌ ಗೆ ಅನಿರೀಕ್ಷಿತ ಭೇಟಿ ನೀಡಿ, ಪರಿಶೀಲನೆಯನ್ನು ನಡೆಸಿದರು.

ಅಲ್ಲದೆ 11-03-2019 ರಂದು ರಾತ್ರಿ ಜಿಲ್ಲಾಧಿಕಾರಿಯವರು ಪೊಲೀಸ್ ಅಧೀಕ್ಷಕ ರೊಂದಿಗೆ ಕೊಲ್ಲೂರು ಚೆಕ್ ಪೋಸ್ಟ್‌ ಗೆ ಅನಿರೀಕ್ಷಿತ ಭೇಟಿ ನೀಡಿ, ಪರಿಶೀಲನೆಯನ್ನು ಕೂಡ ನಡೆಸಿದ್ದಾರೆ.

Facebook Comments

comments